ಮಡಿಕೇರಿ, ಡಿ. ೨೯: ನಾವೀನ್ಯತೆ ಕ್ಷೇತ್ರ-೨ ಮತ್ತು ತಾರ್ಕಿಕ ಸಾಧನೆಗಳು-೨ ಈ ವಿಭಾಗದಲ್ಲಿ ತಲಾ ೨ ರಂತೆ ಒಟ್ಟು ೪ ಪ್ರಶಸ್ತಿ ನೀಡಲಾಗುತ್ತಿದ್ದು, ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ ೫ ರಿಂದ ೧೮ ವರ್ಷದೊಳಗಿನ (ಜುಲೈ ೩೧ಕ್ಕೆ) ಮಕ್ಕಳನ್ನು ೨೦೨೩-೨೪ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾಪುರಸ್ಕಾರ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುವುದು. ಈ ಜಿಲ್ಲಾಮಟ್ಟದ ಪ್ರಶಸ್ತಿಯು ಪ್ರಶಸ್ತಿಪತ್ರ ಹಾಗೂ ರೂ. ೧೦ ಸಾವಿರ ನಗದು ಬಹುಮಾನ ಒಳಗೊಂಡಿದೆ.

ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಈ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬAಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ.

೨೦೨೩-೨೪ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬAಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ಜನವರಿ ೮ ರೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ

(ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ: ೯೪೮೨೧೯೪೧೦೫, ೯೫೩೫೬೨೬೦೫೩) ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ತಿಳಿಸಿದ್ದಾರೆ.