ಪೊನ್ನಂಪೇಟೆ, ಡಿ. ೩೦: ಗೋಣಿ ಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಆಯೋಜಿ ಸಲಾಗಿರುವ ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟಿçÃಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರದ ೫ನೇ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅಗ್ನಿ ಅನಾಹುತಕ್ಕೆ ಕಾರಣ ಹಾಗೂ ಸೂಕ್ತ ಪರಿಹಾರಗಳು ಎಂಬ ವಿಷಯದ ಬಗ್ಗೆ ಗೋಣಿಕೊಪ್ಪಲು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಜೆ.ವಿ. ಸುನಿಲ್ ಕುಮಾರ್ ಮತ್ತು ಸಿಬ್ಬಂದಿ ಮಾಹಿತಿ ನೀಡಿದರು. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಕೊಂಡಾಗ ಆರಿಸುವ ವಿಧಾನದ ಬಗ್ಗೆ ತಿಳಿಸಿದರು. ಮುಖ್ಯವಾಗಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿಯಿತ್ತರು.

ಬೆಂಕಿ ಹೊತ್ತಿಕೊಂಡಾಗ ಅಗ್ನಿಶಾಮಕ ವಾಹನದಿಂದ ಯಾವ ರೀತಿ ಬೆಂಕಿ ಆರಿಸಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಪ್ಪ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ, ಶಿಸ್ತು, ಸೇವಾ ಮನೋಭಾವನೆ ಯನ್ನು ಮೂಡಿಸುವುದರ ಜೊತೆಗೆ ವೇದಿಕೆಯಲ್ಲಿ ನಿಂತು ಮಾತನಾಡುವ ಕಲೆಯನ್ನು ಕಲಿಸುತ್ತದೆ ಎಂದರು. ಕಾವೇರಿ ಪದವಿ ಕಾಲೇಜು ಎನ್‌ಎಸ್‌ಎಸ್ ಅಧಿಕಾರಿ ಎನ್.ಪಿ. ರೀತಾ ಮಾತನಾಡಿದರು. ಈ ಸಂದರ್ಭ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬಿ.ಸಿ. ಅರುಣ್, ಎನ್.ಐ. ಪಾಟೀಲ್, ಸುಧೀರ್ ಜಿ. ಚೌಹಾಣ್, ಶೆಟ್ಟಪ್ಪ ಪೂಜಾರಿ, ಎಂ.ಎಸ್. ಹರ್ಷಿತ್, ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಎನ್‌ಎಸ್‌ಎಸ್ ಅಧಿಕಾರಿ ಕೆ.ಎಂ. ಕುಸುಮ್, ಸಹ ಶಿಬಿರಾಧಿಕಾರಿ ಸಚಿನ್ ನಾಯಕ್ ಇನ್ನಿತರರು ಹಾಜರಿದ್ದರು.