ಮಡಿಕೇರಿ, ಡಿ. ೩೦: ೨೦೨೪ ರ ಜೂನ್ ೨೧ ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆದಿದ್ದು, ಆ ನಿಟ್ಟಿನಲ್ಲಿ ಇದುವರೆಗೆ ಹೆಸರು ನೋಂದಾಯಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನವೆಂಬರ್ ೨೩ ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ನವೆಂಬರ್ ೨೩ ರಿಂದ ಡಿಸೆಂಬರ್, ೯ ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿದAತೆ ನಮೂನೆ-೧೮ ಮತ್ತು ೧೯ ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ (ನವೆಂಬರ್ ೨೩ ರಿಂದ ಡಿಸೆಂಬರ್ ೯ ರವರೆಗೆ) ಕೊಡಗು ಜಿಲ್ಲೆಯಲ್ಲಿ ಒಟ್ಟು ೨೪೫ ಮಂದಿಯ ಅರ್ಜಿ ಸ್ವೀಕರಿಸಿದ್ದು, ೧೯೯ ಅರ್ಜಿಗಳನ್ನು ಅಂಗೀಕರಿಸಲಾಗಿದೆ. ೧೫ ಅರ್ಜಿಗಳು ತಿರಸ್ಕೃತಗೊಂಡಿದ್ದು, ೩೧ ಅರ್ಜಿಗಳನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ವರ್ಗಾಯಿಸಲಾಗಿದೆ.

ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬAಧಿಸಿದAತೆ ಈ

ಅವಧಿಯಲ್ಲಿ (ನವೆಂಬರ್ ೨೩ ರಿಂದ ಡಿಸೆಂಬರ್ ೯ ರವರೆಗೆ) ೭೦೭ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ೬೧೬ ಅರ್ಜಿಗಳು ಅಂಗೀಕಾರವಾಗಿದೆ. ೨೮ ಅರ್ಜಿಗಳು ತಿರಸ್ಕೃತಗೊಂಡಿದ್ದು, ೬೩ ಅರ್ಜಿಗಳನ್ನು ಬೇರೆ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ.

(ಮೊದಲ ಪುಟದಿಂದ) ನಮೂನೆ-೧೮ ಮತ್ತು ನಮೂನೆ-೧೯ರ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಡಾಟಾ ಎಂಟ್ರಿ ಮಾಡಿದ್ದು, ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯ ಅನುಸಾರ ಇಂದು ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಿವರಿಸಿದರು.

ಒಟ್ಟಾರೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಒಟ್ಟು ಇದುವರೆಗೆ ೧೧೭೪ ಮಂದಿ ಮತದಾರರು ಇದ್ದು, ಇವರಲ್ಲಿ ೩೯೨ ಪುರುಷ ಮತದಾರರು, ೭೮೨ ಮಹಿಳಾ ಮತದಾರರು ಇದ್ದಾರೆ. ತಾಲೂಕುವಾರು ಮಡಿಕೇರಿ ೩೯೧, ಸೋಮವಾರಪೇಟೆ ೧೨೪, ವೀರಾಜಪೇಟೆ ೧೭೫, ಕುಶಾಲನಗರ ೨೪೪ ಮತ್ತು ಪೊನ್ನಂಪೇಟೆ ೨೪೦ ಮತದಾರರು ಇದ್ದಾರೆ.

ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಸಂಬAಧಿಸಿದAತೆ ಒಟ್ಟು ೩೬೧೬ ಮತದಾರರು ಇದ್ದು, ೧೫೪೯ ಪುರುಷ ಮತದಾರರು, ೨೦೬೬ ಮಹಿಳಾ ಮತದಾರರು ಇದ್ದಾರೆ. ಇತರೆ ಒಬ್ಬರು ಮತದಾರರು ಇದ್ದಾರೆ. ತಾಲೂಕುವಾರು ಗಮನಿಸಿದಾಗ ಮಡಿಕೇರಿ ೧೧೦೦, ಸೋಮವಾರಪೇಟೆ ೭೩೨, ವೀರಾಜಪೇಟೆ ೫೮೦, ಕುಶಾಲನಗರ ೭೧೩, ಪೊನ್ನಂಪೇಟೆ ೪೯೧ ಮಂದಿ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತದಾರರ ಪಟ್ಟಿಯಲ್ಲಿ ಇನ್ನು ಹೆಸರು ನೋಂದಾಯಿಸದೆ ಇರುವವರು ನಿರಂತರ ಪರಿಷ್ಕರಣೆ ಅವಧಿಯಲ್ಲಿ ನಮೂನೆ-೧೮ ಮತ್ತು ನಮೂನೆ-೧೯ ರ ಅರ್ಜಿಗಳನ್ನು ಸಲ್ಲಿಸಿ, ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.

ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ಸಂಬAಧಪಟ್ಟ ತಾಲೂಕು ಕಚೇರಿಗಳನ್ನು ಸಂಪರ್ಕಿಸಬಹುದು. ಹಾಗೂ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಲಭ್ಯವಿದ್ದು, ಮಾಹಿತಿಯನ್ನು ಪಡೆಯಬಹುದು ಎಂದು ವೆಂಕಟ್ ರಾಜಾ ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ, ಚುನಾವಣಾ ಶಿರಸ್ತೆದಾರ್ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.

ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಸಂಬAಧಿಸಿದAತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಅಂತಿಮ ಮತದಾರರ ಪಟ್ಟಿಯ ಸಂಬAಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದರು.

ಅಂತಿಮ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ತೆನ್ನಿರಾ ಮೈನಾ(ಕಾಂಗ್ರೆಸ್), ಅಪ್ಪಣ್ಣ(ಬಿಜೆಪಿ), ಗುಲಾಬಿ ಜನಾರ್ದನ( ಜೆಡಿಎಸ್), ಕೆ.ಎಸ್.ಹರೀಶ್ (ಬಿಎಸ್‌ಪಿ), ಎಚ್.ಬಿ.ರಮೇಶ್ (ಸಿಪಿಐ (ಎಂ) ಇದ್ದರು.