ಕಣಿವೆ, ಡಿ. ೩೧: ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಕುವೆಂಪು ಜನ್ಮ ದಿನಾಚರಣೆಯನ್ನು ಸ್ಥಳೀಯ ನಾಡಪ್ರಭು ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕುವೆಂಪು ಅವರ ಜನ್ಮದಿನದಂದು ಅವರನ್ನು ಸ್ಮರಿಸಿಕೊಳ್ಳುವುದರ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್, ಕುವೆಂಪು ಅವರು ಸಮಾಜಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಇವರ ಸಾಧನೆಗಳಿಂದ ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆಪಡುವಂತಾಗಿದೆ. ಕುವೆಂಪು ಅವರ ಜೀವನ ಶೈಲಿ, ಅವರು ನಡೆದುಬಂದ ಹಾದಿಯನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾಗಿದೆ ಎಂದರು. ಈ ಸಂದರ್ಭ ತಾಲೂಕು ಒಕ್ಕಲಿಗರ ಸಂಘದ ಪ್ರಮುಖ ಕೃಷ್ಣೇಗೌಡ, ಮುಳ್ಳುಸೋಗೆ ಗ್ರಾ.ಪಂ. ಮಾಜಿ ಸದಸ್ಯ ಜಿ.ಬಿ. ಜಗದೀಶ್, ಸಣ್ಣೇಗೌಡ, ಭರತ್, ಪ್ರಕಾಶ್ ಇನ್ನಿತರರು ಇದ್ದರು.