ವಿಕ್ರಮ್‌ಸಿಂಹಗೆ ಜಾಮೀನು ಮಂಜೂರು

ಹಾಸನ, ಡಿ. ೩೧: ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್‌ಸಿಂಹ ಸಹೋದರ ವಿಕ್ರಮ್‌ಸಿಂಹಗೆ ಜಾಮೀನು ಮಂಜೂರಾಗಿದೆ. ನಂದಗೋಡನಹಳ್ಳಿಯಲ್ಲಿ ೧೨೬ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಬಿಜೆಪಿ ಸಂಸದ ಪ್ರತಾಪ್‌ಸಿಂಹ ಸಹೋದರ ವಿಕ್ರಂಸಿAಹಗೆ ಜಾಮೀನು ನೀಡಿ ಬೇಲೂರಿನ ಸೀನಿಯರ್ ಸಿವಿಲ್ ಜಡ್ಜ್ ಆದೇಶ ಹೊರಡಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಹಾಸನ ಜಡ್ಜ್ ಮನೆಯಿಂದ ವಕೀಲರ ಜೊತೆ ವಿಕ್ರಂಸಿAಹ ಹೊರಬಂದಿದ್ದಾರೆ. ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ ೧೨೬ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿತ್ತು. ಪ್ರಕರಣ ಸಂಬAಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪ ಹಿನ್ನೆಲೆ ವಿಕ್ರಂಸಿAಹರನ್ನು ಬಂಧಿಸಲಾಗಿತ್ತು. ವಿಕ್ರಂಸಿAಹರನ್ನು ಇಂದು ಜಡ್ಜ್ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು.

ರಾಮ ಮಂದಿರ ಟ್ರಸ್ಟ್ನ ಹೆಸರಿನಲ್ಲಿ ಮೋಸ

ನವದೆಹಲಿ, ಡಿ. ೩೧: ಅಯೋಧ್ಯೆ ರಾಮಮಂದಿರ ಟ್ರಸ್ಟ್ನ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಜನರನ್ನು ವಂಚಿಸುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಟ್ರಸ್ಟ್ನ ಅನುಮತಿ ಇಲ್ಲದೇ ದೇಣಿಗೆ ಸಂಗ್ರಹಿಸುವ ಮೂಲಕ ಹಲವು ವ್ಯಕ್ತಿಗಳು ವಂಚನೆ ಮಾಡುತ್ತಿದ್ದಾರೆ. ಈ ವಿಷಯವನ್ನು ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತರಲಾಗಿದ್ದು, ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿಹೆಚ್‌ಪಿಯ ರಾಷ್ಟಿçÃಯ ವಕ್ತಾರ ವಿನೋದ್ ಬನ್ಸಾಲ್, ಮಂದಿರ ಟ್ರಸ್ಟ್ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಇಂತಹ ವಂಚಕರ ಬಗ್ಗೆ ಎಚ್ಚರದಿಂದ ಇರಲು ಜನತೆಗೆ ಮನವಿ ಮಾಡಿದ್ದಾರೆ. ಅವರು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥರಿಗೆ ಕಳುಹಿಸಿದ ದೂರನ್ನು ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಹಂಚಿಕೊAಡಿದ್ದಾರೆ, ಅದರ ಪ್ರತಿಯನ್ನು ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೂ ಕಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ನಕಲಿ ಗುರುತಿನ ಚೀಟಿ ಹೊಂದಿರುವವರು ಜನರನ್ನು ವಂಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಹೆಚ್‌ಪಿ ವಕ್ತಾರ ಬನ್ಸಾಲ್ ತಿಳಿಸಿದ್ದಾರೆ.

ಐಐಟಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಮೂವರ ಬಂಧನ

ವಾರಣಾಸಿ, ಡಿ. ೩೧: ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ವಾರಣಾಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಹೆಚ್‌ಯು ಕ್ಯಾಂಪಸ್‌ನಲ್ಲಿ ಐಐಟಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬAಧಿಸಿದAತೆ ಇಲ್ಲಿನ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಹಾಗೂ ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ ಎಂದು ಲಂಕಾ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಶಿವಕಾಂತ್ ಮಿಶ್ರಾ ತಿಳಿಸಿದ್ದಾರೆ. ನವೆಂಬರ್ ೧ ರ ರಾತ್ರಿ ಅತ್ಯಾಚಾರ ನಡೆದಿತ್ತು. ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು. ಆಗ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು, ಸ್ನೇಹಿತನಿಂದ ಬೇರ್ಪಡಿಸಿ ಅವಳನ್ನು ಬಲವಂತವಾಗಿ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ ೩೫೪ (ಮಹಿಳೆ ಮೇಲೆ ದೌರ್ಜನ್ಯ), ಸಾಮೂಹಿಕ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕೆಶಿ ಹೂಡಿಕೆ ಕುರಿತು ವಿವರ ಕೇಳಿದ ಸಿಬಿಐ

ನವದೆಹಲಿ, ಡಿ. ೩೧: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟೀಸ್ ಜಾರಿ ಮಾಡಿದೆ. ಡಿಸಿಎಂ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ಜನವರಿ ೧೧, ೨೦೨೪ ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಸಿಆರ್‌ಪಿಸಿಯ ಸೆಕ್ಷನ್ ೯೧ ರ ಅಡಿಯಲ್ಲಿ ಹೊರಡಿಸಲಾದ ನೋಟೀಸ್‌ನಲ್ಲಿ, ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್‌ಗೆ ಕೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.

ಸಂಭಾವ್ಯ ಯುದ್ಧಕ್ಕೆ ಸಿದ್ಧರಾಗಿರಿ - ಸರ್ವಾಧಿಕಾರಿ ಕಿಮ್ ಜಾಂಗ್

ಪ್ಯೋAಗ್ಯಾAಗ್, ಡಿ. ೩೧: ಇಡೀ ಜಗತ್ತು ಹೊಸ ವರ್ಷ ೨೦೨೪ರ ಸ್ವಾಗತಕ್ಕೆ ಸಜ್ಜಾಗುತ್ತಿದ್ದರೆ ಅತ್ತ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮಾತ್ರ ಸಂಭಾವ್ಯ ಯುದ್ಧಕ್ಕೆ ಸಿದ್ಧರಾಗಿರುವಂತೆ ತನ್ನ ಸೇನೆಗೆ ಎಚ್ಚರಿಕೆ ನೀಡಿದ್ದಾರೆ. ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರು ದಕ್ಷಿಣ ಕೊರಿಯಾ ಮೇಲೆ ಪರಮಾಣು ದಾಳಿಯ ಹೊಸ ಬೆದರಿಕೆವೊಡ್ಡಿದ್ದು, ಪರ್ಯಾಯ ದ್ವೀಪದಲ್ಲಿ ಯಾವುದೇ ಸಮಯದಲ್ಲಿ ಸಂಭವಿಸಬಹುದಾದ ಯುದ್ಧಕ್ಕೆ ಸನ್ನದ್ಧವಾಗಿರಲು ಮಿಲಿಟರಿ ಶಸ್ತಾçಗಾರವನ್ನು ನಿರ್ಮಿಸುವಂತೆ ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆಯೊAದು ವರದಿ ಮಾಡಿದೆ. ೨೦೨೪ಕ್ಕೆ ತನ್ನ ದೇಶದ ಮಿಲಿಟರಿ, ರಾಜಕೀಯ ಮತ್ತು ಆರ್ಥಿಕ ನೀತಿ ನಿರ್ಧಾರಗಳನ್ನು ನಿಗದಿಪಡಿಸಿದ ಪಕ್ಷದ ಐದು ದಿನಗಳ ಸಭೆಗಳ ಅಂತ್ಯದಲ್ಲಿ ಸುದೀರ್ಘ ಭಾಷಣ ಮಾಡಿದ ಕಿಮ್, ಅಮೆರಿಕ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಅಮೆರಿಕವು ವಿವಿಧ ರೀತಿಯ ಮಿಲಿಟರಿ ಬೆದರಿಕೆಯನ್ನು ಒಡ್ಡುತ್ತಿದೆ ಎಂದು ಆರೋಪಿಸಿದ ಕಿಮ್, ಅಗಾಧ ಯುದ್ಧ ಪ್ರತಿಕ್ರಿಯೆ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ತನ್ನ ಸಶಸ್ತç ಪಡೆಗಳಿಗೆ ಆದೇಶಿಸಿದ್ದು, ನಮ್ಮ ಮೇಲೆ ಆಕ್ರಮಣ ಮಾಡಲು ಶತ್ರುಗಳು ಹವಣಿಸುತ್ತಿರುವ ಹಿನ್ನೆಲೆಯಲ್ಲಿ ಕೊರಿಯಾ ಪರ್ಯಾಯ ದ್ವೀಪದಲ್ಲಿ ಯಾವುದೇ ಸಮಯದಲ್ಲಿ ಯುದ್ಧವು ಭುಗಿಲೇಳಬಹುದು ಎಂದು ಕಿಮ್ ಹೇಳಿದ್ದಾರೆ.

ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಸಂಘಟನೆ ನಿಷೇಧ

ನವದೆಹಲಿ, ಡಿ. ೩೧: ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಸಂಘಟನೆ ‘ತೆಹೀಕ್ ಇ ಹುರಿಯತ್ (ಟಿಇಹೆಚ್)' ಅನ್ನು ಐದು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದೆ. ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ೨೦೦೪ರಲ್ಲಿ ಈ ಸಂಘಟನೆಯನ್ನು ಸ್ಥಾಪಿಸಿದ್ದರು. ನಿಷೇಧಿಸುವ ತೀರ್ಮಾನ ಕುರಿತು ಗೃಹ ಸಚಿವ ಅಮಿತ್ ಶಾ ‘ಎಕ್ಸ್’ನಲ್ಲಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ವಿರೋಧಿ ಭಾವನೆ ಕೆರಳಿಸುವುದು ಹಾಗೂ ಭಯೋತ್ಪಾದನೆ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದ್ದ ಚಟುವಟಿಕೆ ಹಿನ್ನೆಲೆಯಲ್ಲಿ ತೆಹ್ರಕ್ ಇ ಹುರಿಯತ್ ಅನ್ನು ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ನಿಷೇಧಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ. ಮಿರ್ವೈಜ್ ಉಮೆರ್ ಫಾರೂಕ್ ನೇತೃತ್ವದ ಹುರಿಯತ್ ಬಣದಿಂದ ಹೊರಬಿದ್ದ ಬಳಿಕ ೨೦೦೪ರಲ್ಲಿ ಗಿಲಾನಿ ಈ ಸಂಘಟನೆಯನ್ನು ಸ್ಥಾಪಿಸಿದ್ದರು. ಇದರ ಹಲವು ಪದಾಧಿಕಾರಿಗಳ ವಿರುದ್ಧ ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಉತ್ತೇಜನ ನೀಡಲು ಹಣಕಾಸು ಸಂಗ್ರಹಿಸಿದ ಆರೋಪ ಕುರಿತಂತೆ ಎನ್‌ಐಎ ಪ್ರಕರಣ ದಾಖಲಿಸಿದೆ.