ಸುಂಟಿಕೊಪ್ಪ, ಡಿ. ೩೧: ಕಂಟೈನರ್ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಟೇಲ್ ಮತು ಅಂಗಡಿಗೆ ನುಗ್ಗಿರುವ ಘಟನೆ ಸುಂಟಿಕೊಪ್ಪ ಸಮೀ ಪದ ಕೊಡಗರಹಳ್ಳಿ ರಾಷ್ಟಿçÃಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮಡಿಕೇರಿಯಿಂದ ಕುಶಾಲನಗರದತ್ತ ತೆರಳುತ್ತಿದ್ದ ಲಾರಿಯೊಂದು ಮೈಸೂರಿಂದ ಮಡಿಕೇರಿಯತ್ತ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಅಲ್ಲಿಂದ ಮುಂದಕ್ಕೆ ಚಲಿಸಿರುವ ಲಾರಿ ರಸ್ತೆ ಬದಿಯಲ್ಲಿರುವ ಅಂಗಡಿಗಳಿಗೆ ನುಗ್ಗಿ ನಿಂತಿದೆ. ಅದೃಷ್ಟವಶಾತ್ ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಪ್ರಾಣಹಾನಿ ತಪ್ಪಿದಂತಾಗಿದೆ. ಡಿಕ್ಕಿಯ ರಭಸಕ್ಕೆ ಅಂಗಡಿಯ ಮುಂಭಾಗ ಪುಡಿಪುಡಿಯಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.