ಮಡಿಕೇರಿ, ಜ. ೧: ನಗರದ ಹೊಸಬಡಾವಣೆಯಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಾಲಯದ ೨೩ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿAದಲೇ ಶ್ರೀ ಪ್ರಸನ್ನ ಗಣಪತಿಗೆ ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಲಂಕಾರ ಪೂಜೆ, ಮಹಾಗಣಪತಿ ಹೋಮ, ನಮಕ ಕಳಸ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.
ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಸಂಜೆ ಶನೇಶ್ವರ ವ್ರತ ಕಥೆ, ರಂಗಪೂಜೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.