ಮಡಿಕೇರಿ, ಜ. ೧ : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂಥರ್ಗೌಡ ಅವರ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಸಂಬAಧ ಸಭೆಯು ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ನಡೆಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಸುವುದು, ಜಾನುವಾರುಗಳಿಗೆ ಮೇವು ಸರಬರಾಜು ಮಾಡುವುದು, ಸಂಬAಧಪಟ್ಟ ಇಲಾಖೆಗಳು ಕಂದಾಯ, ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಬರ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂಥರ್ ಗೌಡ ಅವರು ಸೂಚಿಸಿದರು. ಮುಂಬರುವ ದಿನಗಳಲ್ಲಿ ಮುಂಜಾಗ್ರತಾ ಕ್ರಮವಹಿಸಲು ತಮ್ಮ ಇಲಾಖೆಗಳಲ್ಲಿ ಅಗತ್ಯ ಕ್ರಮಕೈಗೊಳ್ಳುವ ಸಲುವಾಗಿ ಕ್ರಿಯಾಯೋಜನೆಯ ಅಂದಾಜು ಪಟ್ಟಿ ತಯಾರಿಸುವಂತೆ ಸೂಚಿಸಿದರು. ಮುಂದುವರೆದು ಸೆಸ್ಕ್ ವತಿಯಿಂದ ಕುಡಿಯುವ ನೀರಿಗೆ ತೊಂದರೆಯಾಗದAತೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಿರುವಂತೆ ತಿಳಿಸಿದರು. ವಿವಿಧ ಇಲಾಖೆಗಳು ಯಾವುದೇ ಸಂದರ್ಭ ಬಂದರೂ ಕೂಡ ಅದನ್ನು ಸಮರ್ಥವಾಗಿ ಎದುರಿಸಲು ಬೇಕಾದ ಅಗತ್ಯ ಕ್ರಮವನ್ನು ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್, ನಗರಸಭೆ ಆಯುಕ್ತರಾದ ವಿಜಯ್ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.