ಕೂಡಿಗೆ, ಜ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಹೊಲಿಗೆ ಯಂತ್ರವನ್ನು ಅಧ್ಯಕ್ಷ ಭಾಸ್ಕರ್ ನಾಯಕ್ ವಿತರಿಸಿದರು. ಶೇಕಡ ೨೫ ಅನುದಾನದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಆಯ್ಕೆ ಮಾಡಿ ಮೊದಲನೇ ಹಂತದ ೧೩ ಮಂದಿಗೆ ಹೊಲಿಗೆ ಯಂತ್ರ ನೀಡಲಾಯಿತು. ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಫಿಲೋಮಿನಾ, ಪಾರ್ವತಮ್ಮ, ಗೌರಮ್ಮ, ಈರಯ್ಯ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.