ಮಡಿಕೇರಿ, ಜ. ೧ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ವೀರಾಜಪೇಟೆ ತಾಲೂಕು ಲ್ಯಾಂಪ್ಸ್ ತಿತಿಮತಿ ಇವರ ಸಂಯುಕ್ತಾಶ್ರಯದಲ್ಲಿ ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರುಗಳಿಗೆ ಸಹಕಾರ ಕಾಯ್ದೆ-ಕಾನೂನು ಹಾಗೂ ಸಂಘದ ಅಭಿವೃದ್ಧಿ ಕುರಿತು ಶಿಕ್ಷಣ ಕಾರ್ಯಕ್ರಮವು ತಾ. ೮ ರಂದು ಬೆಳಗ್ಗೆ ೧೧ ಗಂಟೆಗೆ ತಿತಿಮತಿ ಲ್ಯಾಂಪ್ಸ್ ಸಭಾಂಗಣದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ, ವಿರಾಜಪೇಟೆ ತಾಲ್ಲೂಕು ಲ್ಯಾಂಪ್ಸ್ನ ಅಧ್ಯಕ್ಷರಾದ ಪಿ.ಕೆ.ಮಣಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಸಿ.ಎಸ್.ಕೃಷ್ಣ ಗಣಪತಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಪಿ.ವಿ.ಭರತ್, ತಿತಿಮತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಿ.ಎಂ.ರಾಮಕೃಷ್ಣ, ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಿ.ಎಂ.ಅಪ್ಪಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.