ಕೂಡಿಗೆ, ಜ. ೧: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಶಿಕ್ಷಣದ ಜೊತೆಯಲ್ಲೇ ಸಾಹಿತ್ಯದ ಬಗ್ಗೆಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ ಜೀತ್ ಸಿಂಗ್ ಕರೆ ನೀಡಿದರು.

ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೂಡಿಗೆ ಸೈನಿಕ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ರಾಷ್ಟçಕವಿ ಕುವೆಂಪು ಅವರ ೧೧೯ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಮಾತೃಭಾಷೆಯ ಬಗ್ಗೆ ಪ್ರತಿಯೊಬ್ಬರಿಗೂ ಪ್ರೀತಿ, ಗೌರವ, ಅಭಿಮಾನವಿರುತ್ತದೆ. ಅದರ ಜೊತೆಯಲ್ಲಿ ಬೇರೆ ಭಾಷೆಗಳನ್ನು ಗೌರವಿಸುವುದು ಅವಶ್ಯ. ಕುವೆಂಪು ಅವರ ಆದರ್ಶ ಮತ್ತು ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸು ಕಾಣಬೇಕೆಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕುವೆಂಪು ಅವರ ಬಗ್ಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಉಪನ್ಯಾಸ ನೀಡಿದರು. ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರದ ವಿರುದ್ಧ ದ್ವನಿಯೆತ್ತಿ, ವೈಚಾರಿಕತೆ ಬೆಳೆಸುವಲ್ಲಿ ತಮ್ಮ ಸಾಹಿತ್ಯ ರಚನೆಯಲ್ಲಿ ಹೆಚ್ಚಿನ ಬೆಳಕು ಚೆಲ್ಲಿದ ಕುವೆಂಪು ಅವರ ಸಾಹಿತ್ಯ ಹಾಗೂ ವಿಚಾರಧಾರೆಗಳು ನಮ್ಮ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಬಣ್ಣಿಸಿದರು. ಕೊಡಗಿನ ತ್ರಿಭಾಷಾ ಸಾಹಿತಿ, ಶಿಕ್ಷಣ ತಜ್ಞ ದಿ.ವಿ.ಎಸ್.ರಾಮಕೃಷ್ಣ ಅವರ ಹೆಸರಿನ ಧತ್ತಿ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕುಶಾಲನಗರ ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಉಪ ಪ್ರಾಂಶುಪಾಲ ಕ್ಯಾಪ್ಟನ್ ಸ್ಕಾ÷್ವಡರ್ನ್ ಲೀಡರ್ ಮನ್ ಪ್ರೀತ್ ಸಿಂಗ್, ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತಕುಮಾರ್, ಸಮಾಜ ಸೇವಕ ನಟೇಶ್ ಗೌಡ, ಕಸಾಪ ಕಾರ್ಯದರ್ಶಿ ಟಿ.ವಿ.ಶೈಲಾ, ಖಜಾಂಚಿ ಕೆ.ವಿ.ಉಮೇಶ್, ಸಂಘಟನಾ ಕಾರ್ಯದರ್ಶಿ ಸೂದನ ರತ್ನಾವತಿ, ಸೋಮಶೇಖರ್, ಕಾಳಪ್ಪ, ಚಿತ್ರ ರಮೇಶ್ ಇತರರು ಹಾಜರಿದ್ದರು.