ಸೋಮವಾರಪೇಟೆ, ಜ. ೧: ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್ ತಾಲೂಕು ಘಟಕದ ವತಿಯಿಂದ ಜ. ೨೬ರಂದು ಪಟ್ಟಣದಲ್ಲಿ ಅದ್ದೂರಿ ಗಣರಾಜ್ಯೋತ್ಸವ ಸಮಾರಂಭ, ನೃತ್ಯ ಸ್ಪರ್ಧೆ, ಆಂಬ್ಯುಲೆನ್ಸ್ ಸೇವೆಯ ಯೋಜನೆಗೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಬಿ.ವಿ. ರವಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.೨೬ರಂದು ಗಣರಾಜ್ಯೋತ್ಸವ ಸಮಾರಂಭ, ೨ನೇ ವರ್ಷದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ ೧ ಗಂಟೆಗೆ ಸಬಾ ಕಾರ್ಯಕ್ರಮ ನಡೆಯಲಿದ್ದು, ಕೆಟಿಡಿಓ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು, ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ. ರೋಡ್, ಜಿಲ್ಲಾ ಮಾಜಿ ಗೌರವಾಧ್ಯಕ್ಷ ರಫೀಕ್, ತಾಲೂಕು ಗೌರವಾಧ್ಯಕ್ಷ ಉಮೇಶ್, ರೀ ಬಿಲ್ಡ್ ಕೊಡಗು ಫೌಂಡೇಷನ್ನ ಕೆ.ಎ. ಕುಶಾಲಪ್ಪ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಪಿ.ವಿ. ಕೃಷ್ಣ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ನಂತರ ವಿಶ್ವರೂಪ ಕಲಾತಂಡ ದಿಂದ ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ ನಡೆಯಲಿದೆ. ಅಪರಾಹ್ನ ೩ ಗಂಟೆಗೆ ಕೊಡಗು ಜಿಲ್ಲೆಗೆ ಒಳಪಟ್ಟಂತೆ ೧೪ ವರ್ಷ ಒಳಪಟ್ಟ ಮಕ್ಕಳಿಗೆ ನೃತ್ಯ ಸ್ಪರ್ಧೆ ನಡೆಯಲಿದ್ದು, ಪ್ರಥಮ ೬ ಸಾವಿರ, ದ್ವಿತೀಯ ೫ ಸಾವಿರ, ತೃತೀಯ ೪ ಸಾವಿರ ನಗದು ಸೇರಿದಂತೆ ಆಕರ್ಷಕ ಟ್ರೋಫಿ, ನೃತ್ಯಪಟುಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದರು.
ಸAಜೆ ೬ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯನ್ನು ರಾಮನಗರ ಜಿಲ್ಲೆಯ ಗೆಜ್ಜೆಗಾರುಗುತ್ತೆ ಮಠದ ಶ್ರೀ ಕುಮಾರಸ್ವಾಮೀಜಿ ನೆರವೇರಿಸಲಿದ್ದು, ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್ ಕುಂದಾಪುರ, ಶಾಸಕ ಮಂಥರ್ ಗೌಡ, ಮಾಜಿ ಶಾಸಕ ಅಪ್ಪಚ್ಚು ರಂಜನ್, ತಾಲೂಕು ಅಧ್ಯಕ್ಷ ಬಿ.ವಿ. ರವಿ, ಜಿಲ್ಲಾಧ್ಯಕ್ಷ ಎಂ.ಜೆ. ವಿನೋದ್, ಉದ್ಯಮಿಗಳಾದ ಅರುಣ್ ಕಾಳಪ್ಪ, ಹರಪಳ್ಳಿ ರವೀಂದ್ರ, ಗಿರೀಶ್ ಮಲ್ಲಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ತರಗತಿಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು. ಸಾರ್ವಜನಿಕ ಕ್ಷೇತ್ರದ ಸಾಧಕರುಗಳನ್ನು ಸನ್ಮಾನಿಸಲಾಗುವುದು ಎಂದ ಅವರು, ತಾಲೂಕು ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ನೂತನ ಆಂಬ್ಯುಲೆನ್ಸ್ನ್ನು ಲೋಕಾರ್ಪಣೆ ಗೊಳಿಸಲಾಗುವುದು ಎಂದು ತಿಳಿಸಿದರು.
ಸಂಜೆ ೬ ಗಂಟೆ ನಂತರ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ನೃತ್ಯ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನವಾಗಿ ರೂ. ೨೫ ಸಾವಿರ ನಗದು, ದ್ವಿತೀಯ ೧೫ಸಾವಿರ, ತೃತೀಯ ೧೦ ಸಾವಿರ ನಗದು ಮತ್ತು ಟ್ರೋಫಿ ನೀಡಲಾಗು ವುದು. ಹೆಚ್ಚಿನ ಮಾಹಿತಿಗೆ ಮೊ: ೯೪೪೯೨೭೩೦೧೦, ೯೯೭೨೭೦೭೭೧೮ನ್ನು ಸಂಪರ್ಕಿಸ ಬಹುದಾಗಿದೆ ಎಂದರು. ಗೋಷ್ಠಿಯಲ್ಲಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಪ್ರಸನ್ನ, ಸಹ ಕಾರ್ಯದರ್ಶಿ ಭರತ್ ಮಾದಪ್ಪ, ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ, ಖಜಾಂಜಿ ಕೆ.ಎನ್. ದೀಪಕ್ ಉಪಸ್ಥಿತರಿದ್ದರು.