ಪೊನ್ನಂಪೇಟೆ, ಜ. ೧: ಪೊನ್ನಂಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ವತಿಯಿಂದ ನಬಾರ್ಡ್ ಪ್ರಾಯೋಜಕತ್ವದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗೋದಾಮು ಹಾಗೂ ವಾಣಿಜ್ಯ ಮಳಿಗೆ ಕಟ್ಟಡದ ಉದ್ಘಾಟನೆಯನ್ನು ತಾ.೩ ರಂದು ಬೆಳಿಗ್ಗೆ ೧೦ ಗಂಟೆಗೆ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಎ.ಎಸ್.ಪೊನ್ನಣ್ಣ ಉದ್ಘಾಟನೆ ಮಾಡಲಿದ್ದಾರೆ. ಸಂಘದ ಅಧ್ಯಕ್ಷ ಚೀರಂಡ ಕಂದ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಡಿಕೇರಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೆರ ಪಿ.ಗಣಪತಿ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.