ಮಡಿಕೇರಿ, ಜ. ೧: ಸಂಪಾಜೆ-ಕಾಟಕೇರಿ ೨೧.೬ ಕಿ.ಮೀ. ಉದ್ದದ ರಾಷ್ಟಿçÃಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು. ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಪ್ರತಾಪ್ ಸಿಂಹ, ಸುಮಾರು ರೂ. ೧೪.೧೬ ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ೬ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಪಾಜೆಯಿAದ ಸುಂಟಿಕೊಪ್ಪದವರೆಗೆ ೨೧ ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯ ಬೇಕಿದೆ. ಹಾಗೆಯೇ ಕುಶಾಲನಗರದಿಂದ ಸಂಪಾಜೆಯವರೆಗೆ ಅಪಘಾತ ವಲಯವನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದಕ್ಕಾಗಿ ರೂ. ೫೦೦ ಲಕ್ಷ ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಮಡಿಕೇರಿ, ಜ. ೧: ಸಂಪಾಜೆ-ಕಾಟಕೇರಿ ೨೧.೬ ಕಿ.ಮೀ. ಉದ್ದದ ರಾಷ್ಟಿçÃಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು. ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಪ್ರತಾಪ್ ಸಿಂಹ, ಸುಮಾರು ರೂ. ೧೪.೧೬ ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ೬ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಪಾಜೆಯಿAದ ಸುಂಟಿಕೊಪ್ಪದವರೆಗೆ ೨೧ ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯ ಬೇಕಿದೆ. ಹಾಗೆಯೇ ಕುಶಾಲನಗರದಿಂದ ಸಂಪಾಜೆಯವರೆಗೆ ಅಪಘಾತ ವಲಯವನ್ನು ಗುರುತಿಸಲಾಗಿದ್ದು, ಪ್ರಮುಖವಾಗಿ ಬೋಯಿಕೇರಿ ಮತ್ತು ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಇದಕ್ಕಾಗಿ ರೂ. ೫೦೦ ಲಕ್ಷ ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ತಿಳಿಸಿದರು. (ಮೊದಲ ಪುಟದಿಂದ) ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ರಾಷ್ಟಿçÃಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಎಚ್.ಗಿರೀಶ್, ಸಹಾಯಕ ಎಂಜಿನಿಯರ್ ಹನುಮಂತ, ಸುಧಾಕರಶೆಟ್ಟಿ ಇತರರು ಇದ್ದರು.