ಕುಶಾಲನಗರ, ಜ. ೨: ಕುಶಾಲನಗರ ಸೆಸ್ಕ್ ಉಪವಿಭಾಗ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಜನಸಂಪರ್ಕ ಸಭೆ ನಡೆಯಿತು.

ಕೊಡಗು ಮತ್ತು ಚಾಮರಾಜ ನಗರ ವೃತ್ತದ ಅಧೀಕ್ಷಕ ಇಂಜಿನಿಯರ್ ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕು ವ್ಯಾಪ್ತಿಯ ಸಾರ್ವಜನಿಕ ರಿಂದ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ, ದೂರುಗಳನ್ನು ಆಲಿಸ ಲಾಯಿತು.

ಈ ಸಂದರ್ಭ ಮಾತನಾಡಿದ ಸೋಮಶೇಖರ್ ಅವರು, ಪ್ರತಿ ಮೂರು ತಿಂಗಳಿಗೆ ಒಮ್ಮೆ ಜನ ಸಂಪರ್ಕ ಸಭೆಯನ್ನು ಉಪವಿಭಾಗ ಮಟ್ಟದಲ್ಲಿ ನಡೆಸಲಾಗುತ್ತದೆ. ಕಾಫಿ ಬೆಳೆಗಾರ ರೈತರು ಸಕಾಲದಲ್ಲಿ ತಮ್ಮ ಪಂಪ್ ಸೆಟ್‌ಗಳ ವಿದ್ಯುತ್ ಬಿಲ್ ಪಾವತಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಮಡಿಕೇರಿ ಹಾಗೂ ಉಪ ವಿಭಾಗದ ವ್ಯಾಪ್ತಿಯಲ್ಲಿ ಗಿರಿಜನ ಹಾಡಿಗಳ ಸಮೀಕ್ಷೆ ನಡೆಸಿ ವಿದ್ಯುತ್ ಸಂಪರ್ಕದಿAದ ವಂಚಿತರಾಗಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದರು.

ಸಭೆಯಲ್ಲಿ ಚೆಸ್ಕಾಂನ ಕುಶಾಲನಗರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಸಹಾಯಕ ಇಂಜಿನಿಯರ್ ವಿನೋದ್, ಸುಂಟಿಕೊಪ್ಪ ಕಿರಿಯ ಇಂಜಿನಿಯರ್ ಲವಕುಮಾರ್, ಸಹಾಯಕ ತಾಂತ್ರಿಕ ಇಂಜಿನಿಯರ್ ಗೀತಾ ಪಾಲ್ಗೊಂಡಿದ್ದರು. ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಭೆಯ ಬಗ್ಗೆ ಸಮರ್ಪಕ ಮಾಹಿತಿ ನೀಡದಿರುವ ಬಗ್ಗೆ ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಹಕರು ಅಧಿಕಾರಿಗಳೊಂದಿಗೆ ಆಕ್ರೋಶ ವ್ಯಕ್ತಪಡಿಸಿದರು.