ಮಡಿಕೇರಿ, ಜ. ೨: ನಗರೋತ್ಥಾನ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬ ಸೇರಿದಂತೆ ನಗರದಲ್ಲಿರುವ ವಿವಿಧ ಸಮಸ್ಯೆಗಳ ಕುರಿತು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಅವರು ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಮನವಿ ಸಲ್ಲಿಸಿ ಕ್ರಮಕೈಗೊಳ್ಳುವಂತೆ ಕೋರಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಸಚಿವರನ್ನು ಭೇಟಿಯಾದ ಅನಿತಾ ಪೂವಯ್ಯ, ನಗರೋತ್ಥಾನ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸರಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಬೇಕು. ನಗರಸಭೆಯಲ್ಲಿ ತಲೆದೋರಿರುವ ನೌಕರರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಬೇಕು ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.

ಈ ಸಂದರ್ಭ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ, ವಿಧಾನ ಪರಿಷತ್ತು ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಹಾಜರಿದ್ದರು.