ಕೂಡಿಗೆ, ಜ.೨: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಕ್ರೀಡಾ ಶಾಲೆ ಮತ್ತು ಕ್ರೀಡಾ ವಸತಿ ನಿಲಯಗಳಿಗೆ ಸೋಮವಾರಪೇಟೆ, ಕುಶಾಲನಗರ ತಾಲೂಕುಮಟ್ಟದ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಕೂಡಿಗೆ ಕ್ರೀಡಾ ಶಾಲೆಯ ಕ್ರೀಡಾ ಮೈದಾನದಲ್ಲಿ ನಡೆಯಿತು.

ಕ್ರೀಡಾ ಆಯ್ಕೆಯ ಪ್ರಕ್ರಿಯೆಯಲ್ಲಿ ಎಂಟನೆಯ ತರಗತಿಗೆ ಮತ್ತು ಪದವಿ ಪೂರ್ವ ತರಗತಿಗಳಿಗೆ ಅವಕಾಶ ವನ್ನು ಕಲ್ಪಿಸಿಕೊಳ್ಳುವ ಉದ್ದೇಶದಿಂದ ಸುಮಾರು ೨೦೦ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಯ್ಕೆ ಪ್ರಕ್ರಿಯೆಯು ವಿವಿಧ ಕ್ರೀಡಾ ಸ್ಪರ್ಧೆಗಳ ಮೂಲಕ ನಡೆಯಿತು. ಆಯ್ಕೆ ಪ್ರಕ್ರಿಯೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಅವರು ಚಾಲನೆ ನೀಡಿದರು. ಈ ಸಂದರ್ಭ ಕ್ರೀಡಾ ಶಾಲೆಯ ಮುಖ್ಯೋಪಾಧ್ಯಾಯ ದೇವಕುಮಾರ್, ವಿವಿಧ ವಿಭಾಗದ ತರಬೇತಿದಾರರು ಹಾಜರಿದ್ದರು.