ಹೊತ್ತಿ ಉರಿದ ೩೬೭ ಜನರಿದ್ದ ವಿಮಾನ

ಟೋಕಿಯೊ, ಜ. ೨: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್‌ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ವಿಮಾನದಲ್ಲಿ ೩೫೦ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ವಿಮಾನದ ಕಿಟಕಿಗಳಿಂದ ಜ್ವಾಲೆಗಳು ಹೊರಬರುವುದನ್ನು ಕಾಣಬಹುದು. ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿಯಾದ ನಂತರ ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಂತಹ ಸಂದರ್ಭದಲ್ಲಿ ಭಾರೀ ಅನಾಹುತ ತಪ್ಪಿದೆ. ಸದ್ಯ ವಿಮಾನದ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ.

ಮಳೆ ವ್ಯವಸ್ಥೆಯ ಸ್ವರೂಪವೇ ಬದಲು - ತಜ್ಞರ ಆತಂಕ

ಬೆAಗಳೂರು, ಜ. ೨: ಕಳೆದ ವರ್ಷ ‘ಎಲ್ ನಿನೋ’ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿನ ಮಳೆ ವ್ಯವಸ್ಥೆಯ ಸ್ವರೂಪವೇ ಬದಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ವರ್ಷ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ೧೨ ವಾಯುಭಾರ ಕುಸಿತ ಪರಿಸ್ಥಿತಿಗಳು ರೂಪುಗೊಂಡಿದ್ದು, ಆದಾಗ್ಯೂ, ಎಲ್ ನಿನೊ ಪರಿಣಾಮದಿಂದಾಗಿ ಕರ್ನಾಟಕವು ಕಡಿಮೆ ಮಳೆಯನ್ನು ಕಂಡಿದೆ. ಏಕೆಂದರೆ ಈ ಎಲ್ ನಿನೋ ವ್ಯವಸ್ಥೆಗಳು ಭೂಮಿಯಿಂದ ಎಲ್ಲಾ ತೇವಾಂಶವನ್ನು ಹೀರಿಕೊಳ್ಳುತ್ತವೆ. ಇದು ಈ ವರ್ಷ ಹವಾಮಾನ ತಜ್ಞರ ಗಮನವನ್ನು ಸೆಳೆಯಲಿಲ್ಲ. ಇದಕ್ಕೆ ಅರಬ್ಬಿ ಸಮುದ್ರದಲ್ಲಿ ರಚನೆಯಾಗುವ ವ್ಯವಸ್ಥೆಗಳ ಕಡಿಮೆ ಸಂಖ್ಯೆಯೂ ಕಾರಣವಾಗಿತ್ತು. ಮುಂಬರುವ ವರ್ಷಗಳಲ್ಲಿ, ಹವಾಮಾನ ಪರಿಸ್ಥಿತಿಗಳಿಂದಾಗಿ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ವ್ಯವಸ್ಥೆಗಳು ರೂಪುಗೊಳ್ಳುತ್ತವೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದು, ಇದು ಆತಂಕಕಾರಿ ವಿಷಯವಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಹೊಸ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ತಿರುಚಿರಪಳ್ಳಿ, ಜ. ೨: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಲ್ಲಿ ಮಂಗಳವಾರ ಒಟ್ಟು ೨೦,೧೪೦ ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿರುವ ಯೋಜನೆಗಳಿಗೆ ಚಾಲನೆ ನೀಡಿ, ಕೆಲವು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇತ್ತೀಚಿನ ಮಳೆ ಮತ್ತು ಡಿಸೆಂಬರ್ ೨೦೨೩ ರಲ್ಲಿ ರಾಜ್ಯದಲ್ಲಿ ಉಂಟಾದ ಪ್ರವಾಹ ಹಾಗೂ ಅದರಿಂದಾದ ನಷ್ಟಗಳನ್ನು ಉಲ್ಲೇಖಿಸಿದರು ಮತ್ತು ಸಂತ್ರಸ್ತ ಕುಟುಂಬಗಳ ಸ್ಥಿತಿ ನೋಡಿ ನಾನು ತುಂಬಾ ಭಾವುಕನಾಗಿದ್ದೇನೆ ಎಂದರು. ಈ ಬಿಕ್ಕಟ್ಟಿನ ಸಮಯದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡಿನ ಜನರೊಂದಿಗೆ ನಿಂತಿದೆ. ನಾವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು.

ಬಂಧಿತ ಪ್ಯಾಲೆಸ್ಟೀನ್ ಪ್ರಜೆ ಹತ್ಯೆ ಕುರಿತು ಯೋಧನ ವಿಚಾರಣೆ

ಜೆರುಸಲೇಂ, ಜ. ೨: ಸೇನೆಯು ಗಾಜಾ ಪಟ್ಟಿಯಲ್ಲಿ ಸೆರೆ ಹಿಡಿದು ಬಂಧಿಸಲಾಗಿದ್ದ ಪ್ಯಾಲೆಸ್ಟೀನ್ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಕ್ಕೆ ಸಂಬAಧಿಸಿದAತೆ ಶಂಕಿತ ಯೋಧನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಇಸ್ರೇಲ್ ಸೇನೆ ಮಂಗಳವಾರ ಹೇಳಿದೆ. ಉಗ್ರನೊಬ್ಬನನ್ನು ಯೋಧನ ಮೇಲ್ವಿಚಾರಣೆಯಲ್ಲಿ ಇರಿಸಲಾಗಿತ್ತು. ಆದರೆ, ಆ ಯೋಧ ಬಂಧಿತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ ಎಂದು ಸೇನೆ ತಿಳಿಸಿದೆ. ಗುಂಡು ಹಾರಿಸಿದ ಸನ್ನಿವೇಶದ ಕುರಿತು ಮಿಲಿಟರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್‌ನಲ್ಲಿ ಇಸ್ರೇಲ್ ಹಾಗೂ ಹಮಾಸ್ ನಡುವೆ ಸಂಘರ್ಷ ಆರಂಭವಾದಾಗಿನಿAದ ಪ್ಯಾಲಿಸ್ಟೀನ್‌ನ ನೂರಾರು ನಾಗರಿಕರನ್ನು ಸೆರೆಹಿಡಿಯಲಾಗಿದೆ. ಪ್ಯಾಲೆಸ್ಟೀನ್‌ನ ಹತ್ತಕ್ಕೂ ಹೆಚ್ಚು ನಾಗರಿಕರನ್ನು ಇಸ್ರೇಲ್ ಸೇನೆ ಹತ್ಯೆ ಮಾಡಿದೆ. ಅದಕ್ಕೆ ಸಂಬAಧಿಸಿದAತೆ ಅಂತರರಾಷ್ಟಿçÃಯ ಮಟ್ಟದ ತನಿಖೆಯಾಗಬೇಕು ಎಂದು ಹಮಾಸ್ ಕಳೆದ ತಿಂಗಳು ಆಗ್ರಹಿಸಿತ್ತು. ಆದರೆ, ಇಸ್ರೇಲ್ ಸೇನೆಯು, ಸಂಘರ್ಷದ ವೇಳೆ ಇದು ಗಮನಕ್ಕೆ ಬಂದಿರಲಿಲ್ಲ ಎಂದು ಹೇಳಿತ್ತು.

೯೨ರ ಗಲಭೆ ಪ್ರಕರಣ : ಹುಬ್ಬಳ್ಳಿಯ ವ್ಯಕ್ತಿ ಬಂಧನ

ಹುಬ್ಬಳ್ಳಿ, ಜ. ೨: ಹುಬ್ಬಳ್ಳಿ-ಧಾರವಾಡ ಪೊಲೀಸರು ಡಿಸೆಂಬರ್ ೧೯೯೨ ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬAಧಿಸಿದAತೆ ವ್ಯಕ್ತಿಯನ್ನು ಬಂಧಿಸಿದ್ದು, ಪೊಲೀಸರ ಕ್ರಮಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆೆ. ಹಳೇ ಹುಬ್ಬಳ್ಳಿಯ ನಿವಾಸಿ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದಲ್ಲದೆ, ಆ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ವರದಿಯಾದ ಹಿಂಸಾಚಾರದೊAದಿಗೆ ಸಂಬAಧ ಹೊಂದಿರುವ ಹಲವಾರು ಶಂಕಿತರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಬಂಧನವನ್ನು ಸಮರ್ಥಿಸಿಕೊಂಡಿರುವ ಪೊಲೀಸರು ಬಾಕಿ ಉಳಿದಿರುವ ೩೪ ಪ್ರಕರಣಗಳಲ್ಲಿ ಬಂಧನವು ಕಾಲಕಾಲಕ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ಕರಸೇವಕರ ಬಂಧನ ಖಂಡಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆ

ಬೆಂಗಳೂರು, ಜ. ೨: ರಾಮಭಕ್ತರನ್ನು ಹಳೇ ಪ್ರಕರಣಗಳಲ್ಲಿ ಬಂಧಿಸುವುದನ್ನು ವಿರೋಧಿಸಿ ತಾ. ೩ ರಂದು (ಇಂದು) ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ ಅವರು ಈ ವಿಷಯ ತಿಳಿಸಿದರು. ಅಯೋಧ್ಯೆಯಲ್ಲಿ ಇದೇ ೨೨ರಂದು ರಾಮನ ವಿಗ್ರಹ ಪ್ರತಿಷ್ಠಾಪನೆ ಆಗುತ್ತಿದ್ದು, ಇದೇ ಸಂದರ್ಭದಲ್ಲಿ ಕರ ಸೇವಕರನ್ನು ಹುಡುಕಿ ಬಂಧಿಸುವ ಮೂಲಕ ರಾಜ್ಯ ಮಾತ್ರವಲ್ಲ ಇಡೀ ದೇಶಕ್ಕೆ ರಾಮಭಕ್ತರ ವಿರುದ್ಧ ಸಂದೇಶ ಕೊಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ತನ್ನ ವಿರುದ್ಧ ಪ್ರತಿಭಟನೆ ಹಿಂದೆ ಮುಖ್ಯಮಂತ್ರಿ ಕೈವಾಡ - ರಾಜ್ಯಪಾಲ

ತಿರುವನಂತಪುರ, ಜ. ೨: ಕಣ್ಣೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಸ್ಪೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಒಕ್ಕೂಟದ ಸದಸ್ಯರು ತಮ್ಮ ಪ್ರತಿಕೃತಿಯನ್ನು ರಾಜಾರೋಷವಾಗಿ ದಹಿಸಿದ್ದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಬಲದಿAದಲೇ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ. ಎಸ್‌ಎಫ್‌ಐ ಸಂಘಟನೆಯ ಸದಸ್ಯರು ದಿಢೀರನೆ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಿದ್ದು ಅಚ್ಚರಿಯ ವಿಷಯವೇನಲ್ಲ. ಏಕೆಂದರೆ ಅದು ಅವರ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. ಕೇರಳದ ಉತ್ತರ ಭಾಗದ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಎಸ್‌ಎಫ್‌ಐ ಬೆಂಬಲಿಗರು ಹಲವು ಜನರನ್ನು ಹತ್ಯೆಗೈದಿದ್ದಾರೆ ಎಂದೂ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ. ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿದ್ದ ರಾಜ್ಯಪಾಲ ಖಾನ್ ವಿರುದ್ಧ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕಾರ್ಯಕರ್ತರ ಪ್ರತಿಭಟನೆ ನಡುವೆಯೇ ರಾಜ್ಯಪಾಲರು ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲೇ ತಂಗಿದ್ದರು.