ಶ್ರೀಮಂಗಲ, ಜ. ೨: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ಪ್ರತಿಭೆ ಇರುತ್ತದೆ. ತಮ್ಮ ಪ್ರತಿಭೆ ಮೂಲಕ ಜೀವನದಲ್ಲಿ ಅವಕಾಶವನ್ನು ಸೃಷ್ಟಿಸಿಕೊಳ್ಳಬೇಕು. ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಜೀವನವನ್ನು ತಂದೆ ತಾಯಿಗೆ ಹೆಮ್ಮೆಯಾಗುವಂತೆ ವಿದ್ಯಾರ್ಥಿಗಳು ರೂಪಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಕರೆ ನೀಡಿದರು. ಪೊನ್ನಂಪೇಟೆ ಕೊಡವ ಸಮಾಜ ಎಜುಕೇಷನಲ್ ಕೌನ್ಸಿಲ್ ಆಶ್ರಯದಲ್ಲಿ ನಡೆಯುತ್ತಿರುವ ಅಪ್ಪಚ್ಚಕವಿ ವಿದ್ಯಾಸಂಸ್ಥೆಯ ೨೮ನೇ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಪಠ್ಯಕ್ರಮದ ಕಲಿಕೆಯೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಅನಾವರಣ ಮಾಡಲು ವಾರ್ಷಿಕೋತ್ಸವ ವೇದಿಕೆಯಾಗಿದೆ. ಬೋಧಕರು ವಿದ್ಯಾರ್ಥಿಗಳನ್ನು ಕಲ್ಲನ್ನು ಶಿಲ್ಪಮಾಡಿದಂತೆ ಅವರನ್ನು ಉತ್ತಮ ವಿದ್ಯಾರ್ಥಿಯಾಗಿ ರೂಪಿಸಿ ಸಮಾಜದಲ್ಲಿ ಗೌರವಯುತ ಪ್ರಜೆಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರವಿದೆ ಹಾಗೆಯೇ ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಶಾಲೆಗೆ ಆಗಾಗ ಭೇಟಿ ನೀಡಿ ಸಮಾಲೋಚನೆ ನಡೆಸುವುದು ಸಹ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಗೋಣಿಕೊಪ್ಪ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಮಾಳೇಟಿರ ಕಾವೇರಪ್ಪ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ತರಲು ತ್ಯಾಗ ಮಾಡುತ್ತಾರೆ. ಬೋಧಕರು ಶಿಲ್ಪಿಗಳಂತೆ ಮಕ್ಕಳನ್ನು ಬುದ್ಧಿ ಹೇಳಿ ಕಲಿಸುತ್ತಾರೆ. ಶಿಕ್ಷಣದ ಸಮಯದಲ್ಲಿ ಹೆಚ್ಚಿನ ಪರಿಶ್ರಮದಿಂದ ಕಲಿತಾಗ ಮಾತ್ರ ಮುಂದಿನ ಜೀವನ ರೂಪಿಸಿಕೊಳ್ಳಲು ಸಹಾಯವಾಗಲಿದೆ ಎಂದರು. ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಮಾತನಾಡಿದರು.

ಈ ಸಂದರ್ಭ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪಾರಿತೋಷಕ ನೀಡಿ ಪ್ರೋತ್ಸಾಹಿಸಲಾಯಿತು. ಮುಖ್ಯ ಶಿಕ್ಷಕಿ ಮಲಚೀರ ತನುಜಾ ವಾರ್ಷಿಕ ವರದಿ ಮಂಡಿಸಿದರು. ಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಚೆಪ್ಪುಡಿರ ಕಿಟ್ಟು ಅಯ್ಯಪ್ಪ, ಐನಂಡ ಸುಬ್ರಮಣಿ ಮಂದಣ್ಣ, ಕೋಟೆರ ಕಿಶನ್ ಉತ್ತಪ್ಪ, ಕೊಣಿಯಂಡ ಸಂಜು ಸೋಮಯ್ಯ, ಮೂಕಳೇರ ಕಾವ್ಯ ಕಾವೇರಮ್ಮ, ಚೀರಂಡ ದೇಚಮ್ಮ, ಮಲಚೀರ ಲೋಕೇಶ್ ಹಾಜರಿದ್ದರು. ಅಧ್ಯಕ್ಷ ಮಂಡಚAಡ ದಿನೇಶ್ ಚಿಟ್ಯಪ್ಪ ಸ್ವಾಗತಿಸಿ, ಕಾರ್ಯದರ್ಶಿ ಮೂಕಳಮಾಡ ಅರಸು ನಂಜಪ್ಪ ವಂದಿಸಿದರು.