ವೀರಾಜಪೇಟೆ, ಜ. ೨: ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣವು ಕೇವಲ ತರಗತಿಯ ನಾಲ್ಕು ಗೋಡೆಗೆ, ಸೀಮಿತವಾಗದೆ ಬದುಕಿನ ಎಲ್ಲಾ ಆಯಾಮದ ಕ್ಷೇತ್ರಗಳಲ್ಲಿ ಅನ್ವಯಿಸುವ ಶಿಕ್ಷಣ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಬದುಕಿನ ಶಿಕ್ಷಣ ನೀಡುವುದರಲ್ಲಿ ಎಸ್.ಎಂ.ಎಸ್. ಶಾಲೆ ಯಶಸ್ಸು ಕಂಡಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಶ್ಲಾಘಿಸಿದರು.

ವೀರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ ‘ಏಕ ಭಾರತ ಶ್ರೇಷ್ಠ ಭಾರತ’ ಎಂಬ ಧ್ಯೇಯವಾಕ್ಯದಡಿಯಲ್ಲಿ ನಡೆದ ಸಾಂಸ್ಕöÈತಿಕ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವಿಲ್ಲದೆ ನಾವು ಯಶಸ್ವಿಯಾಗಲು ಸಾಧ್ಯವಿಲ್ಲ. ಜ್ಞಾನವು ನಮ್ಮನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಹಾಯ ಮಾಡುತ್ತದೆ. ನೀವು ಉತ್ತಮ ಶಿಕ್ಷಣವನ್ನು ಹೊಂದಿದ್ದರೆ, ಜೀವನದಲ್ಲಿ ನೀವು ಹೆಚ್ಚು ಯಶಸ್ವಿಯಾಗುತ್ತೀರಿ. ಶಿಕ್ಷಣವು ನಮ್ಮ ಜೀವನಕ್ಕೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ ಎಂದರು.

ಸಮಾರAಭದ ದಿವ್ಯ ಸಾನ್ನಿಧ್ಯ ವಹಿಸಿ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀಗಳಾದ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಬಾಲ್ಯಾವಸ್ಥೆ ಎನ್ನುವುದು ಶಿಕ್ಷಣಕ್ಕೆ ಮೀಸಲಾದ ಕಾಲ. ಮನೆ ಮತ್ತು ಶಾಲೆ ಮಕ್ಕಳ ಶಿಕ್ಷಣದಲ್ಲಿ ಮಹತ್ವವಾದ ಪಾತ್ರವನ್ನು ವಹಿಸುತ್ತದೆ. ಶಿಕ್ಷಕರು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸುಶಿಕ್ಷಿತರನ್ನಾಗಿ ಮಾಡುತ್ತಾರೆ. ದೇಶದ ಭವಿಷ್ಯ ಶಿಕ್ಷಕರ ಮೇಲಿದೆ ಎಂದರು.

ಶ್ರೀ ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಹಿರಿಯ ಶ್ರೀಗಳ ಕನಸಿನ ಕೂಸಾಗಿ ಈ ಶಾಲೆ ಬೆಳೆದು ನಿಂತಿದೆ. ಸಿದ್ಧಲಿಂಗ ಮಠದ ಸ್ವಾಮೀಜಿಗಳ ಕೃಪಾಶೀರ್ವಾದ, ಮಾರ್ಗದರ್ಶನದಲ್ಲಿ ಬೆಳೆದಿದ್ದೇವೆ. ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ. ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು.

ಬೆಂಗಳೂರು ಉತ್ತರ ಸಿಜಿಎಸ್ಟಿ ಆಯುಕ್ತರುಗಳಾದ ಡಾ.ಎಂ. ಕೊಟ್ರಸ್ವಾಮಿ ಮಾತನಾಡಿ, ಕೇವಲ ಅಂಕ ಗಳಿಕೆಯಿಂದ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ ಮಾಡಲು ಸಾಧÀ್ಯವಿಲ್ಲ. ನಾವು ಮಕ್ಕಳ ಪ್ರತಿಭೆಗಳನ್ನು ಪೋಷಣೆ ಮಾಡುವಂತಾವರಾಗೋಣ ಎಂದು ಹೇಳಿದರು.

ನಿವೃತ್ತ ಆರ್.ಟಿ.ಐ ಆಯುಕ್ತರುಗಳಾದ ಜಿ.ಎಸ್ ವಿರೂಪಾಕ್ಷಯ್ಯ ಮಾತನಾಡಿ, ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕöÈತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಡಿಸಿಕೊಳ್ಳುವಂತೆ ಕರೆ ನೀಡಿದರು.

ಶಾಲೆಯ ಪ್ರಾಂಶುಪಾಲರಾದ ಕುಸುಮ್ ಟಿಟೋ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಶಾಸಕ ಪೊನ್ನಣ್ಣ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀಗಳಾದ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಬೆಂಗಳೂರು ಉತ್ತರ ಸಿಜಿಎಸ್ಟಿ ಆಯುಕ್ತರುಗಳಾದ ಡಾ. ಕೊಟ್ರಸ್ವಾಮಿ ಎಂ, ನಿವೃತ್ತ ಆರ್.ಟಿ.ಐ ಆಯುಕ್ತರುಗಳಾದ ಜಿ.ಎಸ್ ವಿರೂಪಾಕ್ಷಯ್ಯ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಎಂ.ಎಸ್ ವಿದ್ಯಾಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಶಾಲಾ ಆಡಳಿತ ಮಂಡಳಿ ಸದಸ್ಯರು, ಬೋಧಕೇತರ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.