ಕೂಡಿಗೆ, ಡಿ. ೪: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮದಲ್ಲಿರುವ ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ವಾರ್ಷಿಕೋತ್ಸವವು ತಾ.೫ ರಂದು (ಇಂದು) ಶಾಲಾ ಸಭಾಂಗಣದಲ್ಲಿ ಸಂಜೆ ೪ ಗಂಟೆಗೆ ನಡೆಯಲಿದೆ.

ವಾರ್ಷಿಕೋತ್ಸವದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್. ಬಿ. ಮಂಜುನಾಥ ವಹಿಸಲಿದ್ದಾರೆ.