ಸೋಮವಾರಪೇಟೆ, ಜ. ೩: ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮನವಿ ಸಲ್ಲಿಸಿದೆ.
ಮಾರ್ಗಶಿರ ಹುಣ್ಣಿಮೆಯಂದು ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದAತೆ ಅಂಧಕಾಸು ರನ ಸಂಹಾರ ಧಾರ್ಮಿಕ ಕಾರ್ಯ ಕ್ರಮವನ್ನು ನೆರವೇರಿಸುವ ಸಂದರ್ಭ, ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ ಘಟನೆಯನ್ನು ಖಂಡಿಸಿದ್ದು, ಘಟನೆಗೆ ಸಂಬAಧಿಸಿದ ಆರೋಪಿ ಗಳನ್ನು ಬಂಧಿಸುವAತೆ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ತಾಲೂಕು ಕಚೇರಿಯ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿತು.
ಮನವಿಯನ್ನು ಶಿರಸ್ಥೇದಾರ್ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭ ಅರ್ಚಕರಾದ ಪಿ.ಎನ್. ಪ್ರಸಾದ್, ಮೋಹನ್ ಮೂರ್ತಿ, ತಾರಾಕುಮಾರ್, ಬಿ.ಜಿ. ರವಿ. ಎಚ್.ಆರ್. ನವೀನ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.