ವೀರಾಜಪೇಟೆ, ಜ. ೪: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ರೂ.೪೨ ಕೋಟಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ. ೩೦ ಕೋಟಿ ಅನುದಾನವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಲಿದೆ ಎಂದು ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಹೇಳಿದರು.
ವೀರಾಜಪೇಟೆ ಬಳಿಯ ಬಿಟ್ಟಂಗಾಲ ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ೫ ತಿಂಗಳಾಗಿವೆ. ನಾವು ಬರುವ ಮುನ್ನ ಹಿಂದಿನ ಸರಕಾರ ಖಜಾನೆಯನ್ನು ಖಾಲಿ ಮಾಡಿತ್ತು, ಆದರೆ ಕಾಂಗ್ರೆಸ್ ಸರಕಾರ ಜನರಿಗೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ರಾಜ್ಯ ಸರಕಾರ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ಅವರು ಅಪಪ್ರಚಾರ ಮಾಡುವುದು ಸರಿಯಲ್ಲ. ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಅನುದಾನ ವನ್ನು ಕ್ರೋಢೀಕರಿಸಿ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡುತ್ತಿರುವುದಾಗಿ ತಿಳಿಸಿದ ಅವರು ಕಳೆದ ೨೦ ವರ್ಷಗ ಳಿಂದ ಬಾಕಿ ಉಳಿದಿರುವ ಕಾಮ ಗಾರಿಗಳನ್ನು ಕೊಡಗಿನ ಶಾಸಕರು ಕೈಗೆತ್ತಿಕೊಂಡಿದ್ದಾರೆ ಎಂದರು.
ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಸಭೆಯನ್ನು ದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅದರಲ್ಲೂ ಕೊಡಗಿನಲ್ಲಿ ೧ ಲಕ್ಷ ೧೩ ಸಾವಿರ ಕುಟುಂಬಗಳು ಭಾಗ್ಯಲಕ್ಷಿö್ಮ ಯೊಜನೆಯನ್ನು ಪಡೆದು ಕೊಳ್ಳುತ್ತಿದ್ದಾರೆ ಹಾಗೂ ಉಚಿತ ವಿದ್ಯುತ್ ಸೇರಿದಂತೆ ಕಾಂಗ್ರೆಸ್ ಸರಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಕೊಡಗಿನ ಎಲ್ಲಾ ಕುಟುಂಬಗಳಿಗೂ ತಲುಪುತ್ತಿವೆ. ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ ಶಾಸಕ ಪೊನ್ನಣ್ಣ ಅವರು ಕೊಡಗಿನ ಅಭಿವೃ ದ್ಧಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಲಾಗಿತ್ತು. ಅದೇ ರೀತಿ ಸಚಿವರು ಮುಖ್ಯಂತ್ರಿಗಳೊAದಿಗೆ ಚರ್ಚಿಸಿ ಅನುದಾನ ಬಿಡುಗಡೆಗೊಳಿಸಲಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸಾರ್ವಜನಿಕರು ಕೈಜೋಡಿಸುವಂತಾಗಬೇಕು ಎಂದರು.
ಮಡಿಕೇರಿ ಶಾಸಕ ಮಂಥರ್ ಗೌಡ ಮಾತನಾಡಿ, ಕಳೆದ ಚುನಾವಣೆಯ ೨೦೨೩ರಲ್ಲಿ ಕೊಡಗಿನ ಜನತೆ ಉತ್ತಮ ಸಹಕಾರ ನೀಡಿದ್ದರು. ಅದೇ ರೀತಿ ಮುಂದಿನ ಚುನಾವಣೆಗೂ ಒಗ್ಗಟ್ಟಿನಿಂದ ಕೈಜೋಡಿಸಬೇಕು. ಉಸ್ತುವಾರಿ ಸಚಿವರು ಮುಖ್ಯಮಂತ್ರಿಯೊAದಿಗೆ ಚರ್ಚಿಸಿ ಕೊಡಗಿಗೆ ಉತ್ತಮ ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಕಾಮಗಾರಿ ಸೇರಿದಂತೆ ಎಲ್ಲಾ ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಶಾಸಕರಿಲ್ಲದೆ ಸಮಸ್ಯೆಯಾಗಿತ್ತು. ಈಗ ಕೊಡಗಿನಲ್ಲಿ ಪಕ್ಷದ ಇಬ್ಬರು ಶಾಸಕರಿದ್ದು ಜಿಲ್ಲೆಯಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಮತ್ತು ಸಿ.ಎಸ್. ಅರುಣ್ ಮಾಚಯ್ಯ, ಪಕ್ಷದ ಜಿಲ್ಲಾ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಿ. ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾ ಯಿಲ್, ಪೊನ್ನಂಪೇಟೆ ಅಧ್ಯಕ್ಷ ಎಂ. ನವೀನ್, ಮುಖಂಡರಾದ ರಮಾ ನಾಥ್, ಪಿ.ಕೆ. ಪೊನ್ನಪ್ಪ, ಎರ್ಮು ಹಾಜಿ ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜಾನ್ಸನ್ ಸ್ವಾಗತಿಸಿದರೆ, ನಗರ ಕಾರ್ಯದರ್ಶಿ ಎಂ.ಎA. ಶಶಿಧ ರನ್ ನಿರೂಪಿಸಿದರು. ಕೊನೆಯಲ್ಲಿ ಸಚಿವರು ಅಹವಾಲು ಸ್ವಿಕರಿಸಿದರು.