ಪವನ್ ಖೇರಾ ವಿರುದ್ಧದ ಪ್ರಕರಣ ರದ್ದುಗೊಳಿಸಲು ‘ಸುಪ್ರೀಂ' ನಕಾರ

ನವದೆಹಲಿ, ಜ. ೪: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು, ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದೆ. ‘ಕ್ಷಮಿಸಿ, ನಾವು ಈ ಬಗ್ಗೆ ಯಾವುದೇ ಒಲವು ಹೊಂದಿಲ್ಲ' ಎಂದು ಪೀಠ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಹೆಸರನ್ನು ತಪ್ಪಾಗಿ ಹೇಳಿ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಪವನ್ ಖೇರಾ ಅವರ ಮೇಲಿದೆ. ಕಳೆದ ವರ್ಷ ಆಗಸ್ಟ್ ೧೭ ರಂದು ಅಲಹಾಬಾದ್ ಹೈಕೋರ್ಟ್ ಖೇರಾ ಅವರ ಮನವಿಯನ್ನು ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬAಧಿಸಿದAತೆ ತನಿಖಾಧಿಕಾರಿಯು ಈಗಾಗಲೇ ಸಾಕ್ಷ್ಯಾಧಾರ ಸಂಗ್ರಹಿಸಿದ್ದಾರೆ. ಇದರ ಆಧಾರದ ಮೇಲೆ ಖೇರಾ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಅರ್ಜಿಯನ್ನು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ ೪೮೨ರ ಅಡಿ ವಜಾಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

ರಾಷ್ಟç ರಾಜಧಾನಿಯಲ್ಲಿ ಭಯೋತ್ಪಾದಕನ ಬಂಧನ!

ನವದೆಹಲಿ, ಜ. ೪: ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟç ರಾಜಧಾನಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ವಾಂಟೆಡ್ ಭಯೋತ್ಪಾದಕನನ್ನು ಬಂಧಿಸಿದೆ. ಬಂಧಿತ ಭಯೋತ್ಪಾದಕನನ್ನು ಜಾವೇದ್ ಅಹ್ಮದ್ ಮ್ಯಾಟೊ ಎಂದು ಗುರುತಿಸಲಾಗಿದೆ. ಆತನ ತಲೆಗೆ ರೂ. ೫ ಲಕ್ಷ ಇನಾಮು ಘೋಷಿಸಲಾಗಿತ್ತು. ರಾಷ್ಟಿçÃಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಆತನಿಗಾಗಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾಗಿ ದೆಹಲಿ ಪೊಲೀಸ್ ವಿಶೇಷ ದಳ ತಿಳಿಸಿದೆ. ಜಮ್ಮು-ಕಾಶ್ಮೀರದ ಸೊಪೋರ್ ನಿವಾಸಿಯಾದ ಮ್ಯಾಟೊ ಪಾಕಿಸ್ತಾನಕ್ಕೂ ತೆರಳಿದ್ದ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವು ಭಯೋತ್ಪಾದಕ ಘಟನೆಗಳಲ್ಲಿ ಮ್ಯಾಟೊ ಪೊಲೀಸರಿಗೆ ಬೇಕಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾಗೆ ನಾಲ್ವರು ಬಲಿ - ೨೯೮ ಮಂದಿಗೆ ಪಾಸಿಟಿವ್

ಬೆಂಗಳೂರು, ಜ. ೪: ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೊರೊನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ೨೯೮ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೧೨೪೦ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨೯೮ ಮಂದಿಗೆ ಕೋವಿಡ್-೧೯ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿAದ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೧೨೪೦ಕ್ಕೆ ಏರಿಕೆಯಾಗಿದೆ. ಇಂದು ಕೋವಿಡ್ ನಿಂದ ೨೨೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೭,೭೯೧ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. ೩.೮೨ ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸೋಂಕಿತರಲ್ಲಿ ೧,೧೬೮ ಮಂದಿ ಮನೆ ಆರೈಕೆಗೆ ಒಳಗಾದರೆ, ೭೨ ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ೯ ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಾರು ಡಿಕ್ಕಿ - ಇಬ್ಬರು ಪೊಲೀಸರ ದುರ್ಮರಣ

ಹೌರಾ, ಜ. ೪: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ವ್ಯಾನ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಬ್‌ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ. ಬೆಳಗ್ಗಿನ ಜಾವ ಬಗ್ನಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಬರುಂಡಾ ಪ್ರದೇಶದ ರಾಷ್ಟಿçÃಯ ಹೆದ್ದಾರಿ ೧೬ ರಲ್ಲಿ ದುರ್ಘಟನೆ ಸಂಭವಿಸಿದೆ. ಸಬ್ ಇನ್‌ಸ್ಪೆಕ್ಟರ್ ಸುಜೋಯ್ ದಾಸ್ (೪೫) ಮತ್ತು ಹೋಮ್ ಗಾರ್ಡ್ ಪಲಾಶ್ ಸಮಂತ (೩೧) ಮೃತಪಟ್ಟವರೆಂದು ತಿಳಿದುಬಂದಿದೆ. ಗಾಯಗೊಂಡ ಮೂವರು ಪೊಲೀಸರನ್ನು ಚಾಲಕ ಅಬು ಬಕರ್ (೨೮) ಮತ್ತು ಗೃಹ ರಕ್ಷಕ ದಳದ ಸುಖದೇಬ್ ಬಿಸ್ವಾಸ್ (೨೫) ಮತ್ತು ಅಲೋಕ್ ಬಾರ್ (೨೬) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೋಲ್ಕತ್ತಾ ಮೂಲದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹೌರಾ ನಗರಕ್ಕೆ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸರ ಗಸ್ತು ತಿರುಗುವ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದೆದಿದೆ. ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.