ಕುಶಾಲನಗರ, ಜ. ೩: ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲು ವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಕರೆ ನೀಡಿದರು.

ಕುಶಾಲನಗರದಲ್ಲಿ ನಡೆದ ಮಡಿ ಕೇರಿ ಕ್ಷೇತ್ರದ ವಿಧಾನಸಭಾ ಕಾರ್ಯ ಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಸಕ್ತ ರಾಜ್ಯದಲ್ಲಿ ಪಕ್ಷದ ಪರವಾಗಿ ಜನತೆ ಬೆಂಬಲ ವ್ಯಕ್ತಪಡಿಸುತ್ತಿದ್ದು ಪಕ್ಷ ಜನರಿಗೆ ನೀಡಿದ ಐದು ಉಚಿತ ಯೋಜನೆ ಅನುಷ್ಠಾನಕ್ಕೆ ಬಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಜನತೆಯ ಸಮಸ್ಯೆಗಳು ಪರಿಹಾರ ಆಗಬೇಕು. ಶಾಂತಿ ನೆಮ್ಮದಿಯ ಸಮಾಜ ನಿರ್ಮಾಣವಾಗಬೇಕು ಎಂದರು. ಬಿಜೆಪಿ ಪಕ್ಷ ಜನರ ನಡುವೆ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿದ ಸಚಿವರು ಸರ್ಕಾರ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಿದೆ ಎಂದು ತಿಳಿಸಿದರು. ಜಿಲ್ಲೆಯ ಇಬ್ಬರು ಜನಪ್ರತಿನಿಧಿಗಳು ಎಲ್ಲಾ ರೀತಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ. ತಾಲೂಕು ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರಿಗೆ ರಾಜ್ಯ ಮಟ್ಟದ ಹಾಗೂ ಸ್ಥಳೀಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ಸುಮಾರು ೨೫ ವರ್ಷಗಳ ನಂತರ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳನ್ನು ಜನತೆ ಆಯ್ಕೆ ಮಾಡಿದ್ದು, ಮಡಿಕೇರಿ ಕ್ಷೇತ್ರದಲ್ಲಿ ಈಗಾಗಲೇ ಅಗತ್ಯವಿರುವ ಹಲವು ಯೋಜನೆಗಳನ್ನು ಕಾರ್ಯಗತಗೊಳಿ ಸಲಾಗುತ್ತಿದೆ. ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿ ಸಲಾಗುತ್ತಿದೆ.

ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಪೂರ್ಣ ಪ್ರಮಾಣದಲ್ಲಿ ಶ್ರಮಿಸುವುದಾಗಿ ತಿಳಿಸಿದರು. ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಮಾತನಾಡಿ ರಾಜ್ಯ ಸರ್ಕಾರ ನೀಡಿ ರುವ ಎಲ್ಲಾ ಗ್ಯಾರಂಟಿಗಳನ್ನು ಆರು ತಿಂಗಳ ಅವಧಿಯಲ್ಲಿ ಅನುಷ್ಠಾನಗೊ ಳಿಸಿದೆ. ಆ ಮೂಲಕ ಜನಪರ ಆಡಳಿತ ನಡೆಸುತ್ತಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಪಕ್ಷದ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ನಾಗರಾಜ ಯಾದವ್ ಮಾತನಾಡಿ ಕಾಂಗ್ರೆಸ್ ನುಡಿದಂತೆ ನಡೆದಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಮೂಲಕ ದೇಶದ ಅಭಿವೃದ್ಧಿಯತ್ತ ಗಮನಹರಿಸಲಿದೆ ಎಂದರು.

ಕಾAಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ ಮಾತನಾಡಿ ಅಭಿವೃದ್ಧಿಯಲ್ಲಿ ರಾಜಕೀಯ ಬೇಡ. ಕೇಂದ್ರದಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕಿದೆ. ಜಿಲ್ಲೆಗೆ ರಾಜ್ಯ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಕೋರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಪ್ರಮುಖರಾದ ಸುರಯ್ಯ ಅಬ್ರ‍್ರಾರ್, ಕೆ.ಕೆ. ಮಂಜುನಾಥ್ ಕುಮಾರ್ ಮತ್ತಿತರರು ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ಕುಶಾಲನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ವಿ.ಪಿ. ಶಶಿಧರ್ ಸೋಮವಾರ ಪೇಟೆಯ ಬಿ.ಬಿ. ಸತೀಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಕೆ. ಹಂಸ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, ಪ್ರಮುಖರಾದ ಪೃಥ್ವಿ, ಕೆ.ಎಂ. ಲೋಕೇಶ್, ಕುಶಾಲನಗರ ಕಾಂಗ್ರೆಸ್ ನಗರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಜಿಲ್ಲಾ ತಾಲೂಕು ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳು ಇದ್ದರು. ವಿ.ಪಿ. ಶಶಿಧರ್ ಕಾರ್ಯಕ್ರಮ ನಿರೂ ಪಿಸಿದರು. ಜೋಸೆಫ್ ವಿಕ್ಟರ್ ಸೋನ್ಸ್ ಸ್ವಾಗತಿಸಿದರು.