ವೀರಾಜಪೇಟೆ, ಜ. ೪: ವೀರಾಜಪೇಟೆ ಕೊಡವ ಸಮಾಜದ ಅಧೀನದ ತ್ರಿವೇಣಿ ಶಾಲೆಯ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಆಪಾಡಂಡ ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಎ. ಮನುಕುಮಾರ್, ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಎಂ. ಅವರು ಆಗಮಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡವ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ಅವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ತ್ರಿವೇಣಿ ಶಾಲೆಯ ಕಾರ್ಯದರ್ಶಿ ಅಮ್ಮಣಿಚಂಡ ಗಂಗಮ್ಮ, ಕೊಡವ ಸಮಾಜದ ಉಪಾಧ್ಯಕ್ಷ ಕುಯಿಮಂಡ ಜೆ. ಕಿರಣ್ ಕುಮಾರ್, ಕಾರ್ಯದರ್ಶಿಗಳಾದ ಮಾಳೇಟಿರ ಶ್ರೀನಿವಾಸ್, ತ್ರಿವೇಣಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕೊಡವ ಸಮಾಜ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ವರದಿಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಕೋಣೆರಿರ ಕಾವೇರಮ್ಮ ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಕುಪ್ಪಡಮಾಡ ಪ್ರತಿಮಾ ಸ್ವಾಗತಿಸಿ, ಸಹಶಿಕ್ಷಕಿ ರೂಪ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟರು. ವಿದ್ಯಾರ್ಥಿನಿ ಪೂಜಾ ಟಿ.ಕೆ. ವಂದಿಸಿದರು. ಕಾರ್ಯಕ್ರಮದಲ್ಲಿ ಸಹಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.