ಮಡಿಕೇರಿ, ಜ. ೩: ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಆಯೋಗ ರಚಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ.೫ ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೊಸ ವರ್ಷದಲ್ಲಿ ಮತ್ತೆ ಕೊಡವ ಲ್ಯಾಂಡ್ ಹೋರಾಟವನ್ನು ತೀವ್ರಗೊಳಿಸಲಿದ್ದು, ಅಂದು ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಸಲ್ಲಿಸುವುದಾಗಿ ಹೇಳಿದ್ದಾರೆ.