ಸೋಮವಾರಪೇಟೆ, ಜ. ೩: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಕೊಡಗಿನ ಜನತೆ ಹೆಚ್ಚಿನ ಶಕ್ತಿ ತುಂಬಿದ್ದು, ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಜನತೆಯ ಶ್ರೇಯೋಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು.

ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ ರೂ. ೪.೫೦ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಗೆ ಕೊಡಗು ಹೆಸರು ವಾಸಿಯಾಗಿದೆ. ಕ್ರೀಡಾಪಟುಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕಿದೆ. ಇಲ್ಲಿನ ಜನತೆಯೂ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹಿಸುತ್ತಾ ಬಂದಿದ್ದು, ಶಿಕ್ಷಣ ಕ್ಷೇತ್ರವೂ ಪ್ರಗತಿ ಕಾಣುತ್ತಿದೆ. ಇಲ್ಲಿನ ಟರ್ಫ್ ಮೈದಾನದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟçಮಟ್ಟದ ಪಂದ್ಯಾಟಗಳು ನಡೆಯಲಿದ್ದು, ಸ್ಥಳೀಯ ಹಾಕಿ ಪಟುಗಳಿಗೂ ಅನುಕೂಲವಾಗಲಿದೆ ಎಂದರು.

ಈ ಹಿಂದೆ ಸಚಿವರಾಗಿದ್ದ ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಟರ್ಫ್ ಮೈದಾನ ಕಾಮಗಾರಿ ಆರಂಭಿಸಲಾಗಿತ್ತು. ಈಗಿನ ಶಾಸಕರು ಬಾಕಿ ಅನುದಾನ ನೀಡಿ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಜನಪ್ರತಿನಿಧಿ ಗಳು ಬದಲಾಗುತ್ತಾ ಇರುತ್ತಾರೆ. ಆದರೆ ಅಭಿವೃದ್ಧಿ ಕಾರ್ಯಗಳು ಮುಂದೆ ಸಾಗಬೇಕು ಎಂದರು.

ಜಿಲ್ಲೆಯಲ್ಲಿ ಈರ್ವರು ಯುವ ಶಾಸಕರಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಜನತೆ ಬೆಂಬಲ ನೀಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ. ಮೂಲಭೂತ ಸೌಕರ್ಯಗಳನ್ನು ಹಂತಹAತವಾಗಿ ಪೂರೈಸುತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ಈ ಭಾಗದ ಕ್ರೀಡಾಪಟುಗಳ ಹಲವು ವರ್ಷದ ಬೇಡಿಕೆ ಇದೀಗ ಈಡೇರಿದೆ. ಟರ್ಫ್ ಮೈದಾನದಲ್ಲಿ ಆಟವಾಡಲು ಈ ಭಾಗದ ಕ್ರೀಡಾಪಟುಗಳಿಗೆ ಅವಕಾಶ ಇರಲಿಲ್ಲ. ಇದೀಗ ಆ ಕೊರತೆ ನೀಗಿದೆ. ಸ್ಥಳೀಯರಿಗೆ ಇದರಿಂದ ಹೆಚ್ಚಿನ ಅವಕಾಶ ಲಭ್ಯವಾಗಲಿದೆ. ಟರ್ಫ್ ಮೈದಾನವನ್ನು

(ಮೊದಲ ಪುಟದಿಂದ) ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಮೂಲಕ ಭದ್ರತೆ ಒದಗಿಸಲು ಇಲಾಖೆ ಕ್ರಮ ಕೈಗೊಳ್ಳಬೇಕು ಎಂದರು.

ಮೈದಾನಕ್ಕೆ ತಡೆಗೋಡೆ,

ಗ್ಯಾಲರಿ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಅಗತ್ಯವಿದ್ದು,

ಅನುದಾನ ಒದಗಿಸುವಂತೆ

ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಹಾಕಿ ಕ್ರೀಡೆ ಕೊಡಗಿನವರಿಗೆ ರಕ್ತಗತವಾಗಿದೆ. ಕ್ರೀಡೆಗೆ ಎಲ್ಲರನ್ನೂ ಒಂದುಗೂಡಿಸುವ ಶಕ್ತಿಯಿದೆ.

ಕ್ರೀಡೆ ಮೂಲಕ ಎಲ್ಲರೂ ಒಂದಾಗಬೇಕಿದೆ ಎಂದು ಆಶಯ ವ್ಯಕ್ತಪಡಿಸಿದರು.

೨೦೧೩ರಲ್ಲಿ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕ್ರೀಡಾ ಸಚಿವರಾಗಿದ್ದ ಸಂದರ್ಭ ಸೋಮವಾರಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಟರ್ಫ್ ನಿರ್ಮಾಣಕ್ಕೆ ಜಾಗ ಗುರುತು ಮಾಡಿ, ಕೆಲಸ ಆರಂಭಿಸಿದ್ದರು.

ಆದರೆ ನಿರೀಕ್ಷಿತ ಸಮಯದಲ್ಲಿ ಹಿಂದಿನ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಸಚಿವರಾಗಿದ್ದ ಸಂದರ್ಭ ಚಾಲನೆಗೊಂಡ ಟರ್ಫ್ ಮೈದಾನದ ಉದ್ಘಾಟನೆಗೆ ಅಪ್ಪಚ್ಚುರಂಜನ್ ಸೇರಿದಂತೆ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರುಗಳನ್ನು ಆಹ್ವಾನಿಸಿಲ್ಲ. ರಂಜನ್ ಅವರು ವಿಶೇಷ ಆಸಕ್ತಿಯ ಮೇರೆ ಅನುದಾನ ತಂದಿದ್ದಾರೆ. ಹಲವಷ್ಟು ಅಡೆತಡೆಗಳ ನಡುವೆಯೂ ಇಲ್ಲಿಯೇ ಟರ್ಫ್ ಮೈದಾನ ನಿರ್ಮಾಣವಾಗಿದೆ. ಆದರೆ ಉದ್ಘಾಟನೆಯ ಆಹ್ವಾನ ಪತ್ರಿಕೆಯಲ್ಲಿ ಕನಿಷ್ಟ ಅವರ ಹೆಸರನ್ನೂ ಹಾಕಿಲ್ಲ. ಬಿಜೆಪಿ ಜನಪ್ರತಿನಿಧಿಗಳನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮೈದಾನದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.

ಶೇ. ೯೫ರಷ್ಟು ಕಾಮಗಾರಿ ಹಿಂದಿನ ಅವಧಿಯಲ್ಲಿಯೇ ಪೂರ್ಣಗೊಂಡಿದೆ. ಇನ್ನೂ ಕೆಲವೊಂದು ಕೆಲಸಗಳು ಬಾಕಿಯಿವೆ. ಕಾರ್ಯಕ್ರಮದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ, ಉಪವಿಭಾಗಾಧಿಕಾರಿ ವಿನಾಯಕ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಅವರುಗಳು ಉಪಸ್ಥಿತರಿದ್ದರು.

ಇದೇ ಸಂದರ್ಭ ಜಾಗದ ದಾನಿಗಳಾದ ಸಿ.ಕೆ. ಕಾಳಪ್ಪ

ಅವರ ಮೊಮ್ಮಗ ಸುಮೇದ್,

ಹಿರಿಯ ಕ್ರೀಡಾಪಟುಗಳಾದ ಬಿ.ಎಂ.ಸುರೇಶ್, ಸುಬ್ಬಯ್ಯ ಅವರುಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಪೊಲೀಸ್ ಅಂತೋಣಿ ಕಾರ್ಯಕ್ರಮ ನಿರ್ವಹಿಸಿದರು.