ಸುಂಟಿಕೊಪ್ಪ, ಜ. ೪: ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ.೬ ರಂದು ಸುವರ್ಣ ಕರ್ನಾಟಕ ೫೦ ರ ಅಂಗವಾಗಿ ಹೋಬಳಿ ಮಟ್ಟದ ಪ್ರಾಥಮಿಕ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಪೂರ್ವಾಹ್ನ ೧೦ ಗಂಟೆಗೆ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಯಲಿದೆ.
ಕನ್ನಡ ನಾಡು ನುಡಿಗೆ ಸಂಬAಧಿಸಿದ ಭಾವ ಗೀತೆ ಗಾಯನ ಸ್ಪರ್ಧೆ, ಜಾನಪದ ಗೀತೆ ಗಾಯನ ಸ್ಪರ್ಧೆ, ಜ್ಞಾನ ಪೀಠ ಪ್ರಶಸ್ತಿ ವಿಜೇತ ಕನ್ನಡ ಸಾಹಿತಿಗಳ ಬಗ್ಗೆ ಪ್ರಬಂಧ ಸ್ಪರ್ಧೆ, ಕನ್ನಡ ನಾಡು ನುಡಿಗೆ ಸಂಬAಧಿಸಿದ ಚಿತ್ರ ಕಲಾ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಶಾಲಾ ಮಟ್ಟದಲ್ಲಿ ಈಗಾಗಲೇ ಸ್ಪರ್ಧೆಗಳನ್ನು ನಡೆಸಲಾಗಿದ್ದು, ಆಯ್ಕೆಗೊಂಡ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಕೊಡಗು ಜಿಲ್ಲಾ ಕ.ಸಾ.ಪ. ಮತ್ತು ಕುಶಾಲನಗರ ತಾಲೂಕು ಕ.ಸಾ.ಪ. ಸಂಯುಕ್ತಾಶ್ರಯದಲ್ಲಿ “ಕನ್ನಡ ಕೊಡವ ಭಾಷಾ ಬೆಳವಣಿಗೆ” ಎಂಬ ವಿಚಾರದ ಬಗ್ಗೆ ಮೊಣ್ಣಂಡ.ಕೆ.ಚAಗಪ್ಪ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮವನನ್ನು ಏರ್ಪಡಿಸಲಾಗಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.