ಶ್ರೀಕಾಂತ ಪೂಜಾರಿ ಸೇರಿ ಒಟ್ಟು ೩೬ ಜನರ ಬಂಧನ: ಪಟ್ಟಿ ಬಿಡುಗಡೆ ಮಾಡಿದ ಸಿಎಂ
ಬೆAಗಳೂರು, ಜ. ೩: ೧೯೯೨ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಾಗಿರುವ, ೧೬ ಪ್ರಕರಣಗಳು ಹಾಗೂ ಎಲ್ಲಾ ಪ್ರಕರಣಗಳ ವಿವರಣೆಯುಳ್ಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊAಡಿದ್ದಾರೆ. ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದಿದ್ದಾರೆ. ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ ೧೬ ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಒತ್ತಾಯಿಸಿದ್ದಾರೆ. ಕಳೆದ ೨೦೨೩ನೇ ಸಾಲಿನಲ್ಲಿ ಹುಬ್ಬಳ್ಳಿ - ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬAಧಿಸಿದAತೆ ಎಲ್.ಪಿ.ಸಿ (ಕಾನೂನು ವಿಚಾರಣಾ ಪ್ರಮಾಣಪತ್ರ) ಪ್ರಕರಣಗಳಲ್ಲಿ ಒಟ್ಟು ೩೬ ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ ೩೨ನೆಯ ವ್ಯಕ್ತಿ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ನವದೆಹಲಿ, ಜ. ೩: ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ ೧೩ ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ನೇತೃತ್ವದ ಪೀಠವು ಅರ್ಜಿಯನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅರ್ಜಿದಾರರು ಈಗಾಗಲೇ ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಈ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಮತ್ತು ಅದರ ಪ್ರಕಾರ ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಮನೋಜ್ ಜೈನ್ ಅವರನ್ನೊಒಳಗೊಂಡ ಪೀಠ ಹೇಳಿದೆ. ವಿಚಾರಣಾ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಆಕೆಯನ್ನು ಸಮರ್ಥಿಸಿಕೊಳ್ಳಲು ಅವರ ಆಯ್ಕೆಯ ವಕೀಲರನ್ನು ಸಂಪರ್ಕಿಸಲು ಆಕೆಗೆ ಅವಕಾಶವಿಲ್ಲದ ಕಾರಣ ಪೊಲೀಸ್ ಕಸ್ಟಡಿಯು ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ನೀಲಂ ಆಜಾದ್ ಅವರ ವಕೀಲರು ವಾದಿಸಿದರು. ವಿಚಾರಣೆಯ ಸಂದರ್ಭದಲ್ಲಿ, ಆಕೆಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡುಬAದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ರಾಜ್ಯದಲ್ಲಿ ಕೊರೊನಾದಿಂದ ಸಾವು:೨೬೦ ಮಂದಿಗೆ ಪಾಸಿಟಿವ್
ಬೆಂಗಳೂರು, ಜ. ೩: ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು ೨೬೦ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೧೧೭೫ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨೬೦ ಮಂದಿಗೆ ಕೋವಿಡ್-೧೯ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿAದ ಕೊಪ್ಪಳ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೧,೧೭೫ಕ್ಕೆ ಏರಿಕೆಯಾಗಿದೆ. ಇಂದು ಕೋವಿಡ್ನಿಂದ ೨೨೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೭,೪೯೭ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. ೩.೪೬ ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿಯೇ ೧೩೪ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದಂತೆ ಬಾಗಲಕೋಟೆ ೪, ಬಳ್ಳಾರಿ ೨, ಬೆಂಗಳೂರು ಗ್ರಾಮಾಂತರ ೨೦, ಚಾಮರಾಜನಗರ ೪, ಚಿಕ್ಕಬಳ್ಳಾಪುರ ೪, ಚಿತ್ರದುರ್ಗದಲ್ಲಿ ಎರಡು, ದಕ್ಷಿಣ ಕನ್ನಡ ೯, ದಾವಣಗೆರೆ ೩, ಧಾರವಾಡ ೯, ಗದಗ ೧, ಹಾಸನ ೨, ಕೋಲಾರ ೧, ಕೊಪ್ಪಳ ೧, ಮಂಡ್ಯ ೮, ಮೈಸೂರು ೨೪, ರಾಯಚೂರು ೧, ರಾಮನಗರ ೭, ಶಿವಮೊಗ್ಗ ೧೧, ತುಮಕೂರು ೬, ಉತ್ತರ ಕನ್ನಡ ೪ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಇಂದು ೩ ಕೊವಿಡ್ ಕೇಸ್ ಪತ್ತೆಯಾಗಿದೆ. ಜೊತೆಗೆ ಇವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರೈಲು ಸ್ಫೋಟ ಪ್ರಕರಣದಲ್ಲಿ ಇಬ್ಬರಿಗೆ ಗಲ್ಲು ಶಿಕ್ಷೆ
ಜೌನ್ಪುರ, ಜ. ೩: ೨೦೦೫ರ ಶ್ರಮಜೀವಿ ಎಕ್ಸ್ಪ್ರೆಸ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಬ್ಬರಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ ರೈ ಅವರು ಗಲ್ಲು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ. ಜುಲೈ ೨೮, ೨೦೦೫ ರಂದು ಉತ್ತರ ಪ್ರದೇಶದ ಜೌನ್ಪುರ ರೈಲು ನಿಲ್ದಾಣದ ಬಳಿ ಶ್ರಮಜೀವಿ ಎಕ್ಸ್ಪ್ರೆಸ್ ಕೋಚ್ನಲ್ಲಿ ಸ್ಫೋಟ ಸಂಭವಿಸಿ ೧೪ ಜನರು ಸಾವನ್ನಪ್ಪಿದ್ದರು ಮತ್ತು ೬೧ ಜನ ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಜೇಶ್ ರೈ ಅವರು, ಕಳೆದ ಡಿಸೆಂಬರ್ ೨೨ ರಂದು ಹರ್ಕತ್-ಉಲ್-ಜಿಹಾದ್-ಅಲ್-ಇಸ್ಲಾಮಿಯ ಸಂಘಟನೆಯ ಇಬ್ಬರು ಕಾರ್ಯಕರ್ತರಾದ ಹಿಲಾಲುದ್ದೀನ್ ಮತ್ತು ನಫಿಕುಲ್ ಬಿಸ್ವಾಸ್ ತಪ್ಪಿತಸ್ಥರೆಂದು ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದ್ದಾರೆ. ಬಾಂಗ್ಲಾದೇಶ ನಿವಾಸಿ ಹಿಲಾಲುದ್ದೀನ್ ವಿರುದ್ಧ ರೈಲಿನಲ್ಲಿ ಬಾಂಬ್ ಇಟ್ಟ ಆರೋಪ ಹೊರಿಸಿದ್ದರೆ, ಪಶ್ಚಿಮ ಬಂಗಾಳದ ನಿವಾಸಿ ನಫಿಕುಲ್ ಬಿಸ್ವಾಸ್ ವಿರುದ್ಧ ಸಹಾಯ ಮಾಡಿದ ಆರೋಪವಿದೆ. ಸದ್ಯ ಈ ಇಬ್ಬರು ಅಪರಾಧಿಗಳು ಮತ್ತೊಂದು ಪ್ರಕರಣದಲ್ಲಿ ಹೈದರಾಬಾದ್ ಜೈಲಿನಲ್ಲಿದ್ದಾರೆ. ಶ್ರಮಜೀವಿ ರೈಲು ಸ್ಫೋಟ ಪ್ರಕರಣದಲ್ಲಿ ಇತರ ಇಬ್ಬರು ಅಪರಾಧಿಗಳಿಗೆ ೨೦೧೬ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.