ಕುಶಾಲನಗರ, ಜ. ೩: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮ ಸಮಾಜದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಸಮಾಜದ ಉಪಾಧ್ಯಕ್ಷ ದುರ್ಗೇಶ್, ವಿಶ್ವಕರ್ಮ ಜನಾಂಗದ ಶ್ರೇಷ್ಠ ಶಿಲ್ಪಿಗಳಲ್ಲಿ ಒಬ್ಬರಾಗಿದ್ದ ಜಕಣಾಚಾರಿ, ನಾಡಿನ ಶಿಲ್ಪಿಗಳಿಗೆ ಮಾರ್ಗದರ್ಶಕರಾಗಿದ್ದಾರೆ ಎಂದು ತಿಳಿಸಿದರು.

ಸಮಾಜದ ಅಧ್ಯಕ್ಷ ಲಿಂಗಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ಮುಖಂಡರುಗಳಾದ ವಿ. ಕುಮಾರ್ ರಾಜಮೂರ್ತಿ, ನಾಗಣ್ಣಾಚಾರ್, ಕೆ.ಬಿ. ಮೋಹನ್, ಮಹಿಳಾ ಘಟಕದ ಅಧ್ಯಕ್ಷೆ ಲಲಿತ ವರದರಾಜ್, ಭಾರತಿ ಮತ್ತಿತರರು ಇದ್ದರು.