ವೀರಾಜಪೇಟೆ, ಜ. ೩: ವಿದ್ಯಾರ್ಥಿಗಳ ಜೀವನ ಎಂಬುದು ಜೀವನ ಮಾರ್ಗದ ಮೈಲಿಗಲ್ಲು. ವಿದ್ಯಾರ್ಥಿ ಜೀವನದಲ್ಲಿ ಕಲಿತ ವಿದ್ಯೆಯು ಜೀವನಪರ್ಯಂತ ಸಾಗಿ ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಸಹಕಾರಿಯಾಗುತ್ತದೆ ಎಂದು ಕನ್ನಡ ಮತ್ತು ಕೊಡವ ಪ್ರಾದೇಶಿಕ ಚಲನಚಿತ್ರ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಹೇಳಿದರು.
ಕಾವೇರಿ ಪದವಿ ಪೂರ್ವ ಕಾಲೇಜು ವೀರಾಜಪೇಟೆ ವಾರ್ಷಿಕೋತ್ಸವ ಸಮಾರಂಭ ಮತ್ತು ೨೦೨೩-೨೪ ನೇ ಸಾಲೀನ ಶೈಕ್ಷಣಿಕ ಪ್ರಶಸ್ತಿ ಪ್ರಧಾನ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಮಾತನಾಡಿದ ಯಶೋಧ ಪ್ರಕಾಶ್ ಅವರು ವಿದ್ಯಾರ್ಥಿಗಳು ಮೌಲ್ಯ ಆಧಾರಿತ ಗುಣಗಳನ್ನು ಮೈಗೂಡಿಸಿ ಕೊಳ್ಳಬೇಕು, ಗುರು, ಹಿರಿಯರು, ಪೋಷಕರಿಗೆ ಗೌರವ ನೀಡುವುದು ಜೀವನದ ಒಂದು ಅಂಗವೆAದು ಭಾವಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನು ಕುಮಾರ್ ಅವರು ವಿದ್ಯಾರ್ಥಿ ಜೀವನ ಸಾಮಾಜಿಕ ಜೀವನದ ಮೈಲಿಗಲ್ಲಿನಂತೆ. ಕಲಿಕೆಯು ನಮಗೆ ಪಠ್ಯಗಳಲ್ಲಿರುವ ವಿಷಯಗಳನ್ನು ಪ್ರಸ್ತುತಪಡಿಸುತ್ತದೆ. ಆದರೇ ಸಮಾಜದೊಂದಿಗೆ ಬೆರೆತು ಕಲಿಯುವ ವಿಷಯಗಳು ಸಾಮಾಜಿಕ ಜೀವನದಲ್ಲಿ ಹಲವು ಸಾಧನೆಗೆ ಪ್ರಚೋದನೆ ನೀಡುತ್ತದೆ. ಶಾಲಾ ಕಾಲೇಜುಗಳಲ್ಲಿ ಕಲಿತ ನಿರ್ದಿಷ್ಟವಾದ ವಸ್ತು ವಿಷಯಗಳಿಗೆ ತಕ್ಕದಾದ ನೌಕರಿ ದೊರಕಲು ಕಷ್ಟಸಾಧ್ಯ. ಕೌಶಲ್ಯಾಭಿವೃದ್ಧಿ ಕಲಿಕೆಯಿಂದ ಸ್ವತ: ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ಅವರು ೨೦೨೩-೨೪ ನೇ ಸಾಲೀನ ಕಾಲೇಜಿನ ಶೈಕ್ಷಣಿಕ ವಾರ್ಷಿಕ ವರದಿಯನ್ನು ಕಾರ್ಯಕ್ರಮದ ಮುಂದಿಟ್ಟರು. ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ., ಸಾಂಸ್ಕೃತಿಕ, ಕ್ರೀಡಾ, ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಸಾಧನೆ, ಕಾಲೇಜಿನ ಪ್ರಗತಿ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದರು.
ವೇದಿಕೆಯಲ್ಲಿ ಕನ್ನಡ ಮತ್ತು ಕೊಡವ ಪ್ರಾದೇಶಿಕ ಚಲನಚಿತ್ರ ನಿರ್ದೇಶಕಿಯಾದ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರನ್ನು ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ೨೦೨೩-೨೪ನೇ ಸಾಲಿನಲ್ಲಿ ಸಾಂಸ್ಕೃತಿಕ ಎನ್.ಸಿ.ಸಿ, ಎನ್.ಎಸ್. ಎಸ್. ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿ ಗಳಿಗೆ ಸ್ಮರಣಿಕೆ ನೀಡಿ ಗೌರವಿಸ ಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಳಿಂದ ನಾಡು ದೇಶದ ಸಂಸ್ಕೃತಿ ಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾವೇರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರು ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎ.ಎಂ. ಡಯಾನ ಸೋಮಯ್ಯ, ವಿದ್ಯಾರ್ಥಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಲೀಲ್ ಬಿ, ಸಹ ಕಾರ್ಯದರ್ಶಿ ಮೊಹಮ್ಮದ್ ಅನಾಸ್ ಸಿ.ಎ. ಮತ್ತು ಹಸೀನಾ ಎಂ.ಎ., ಕ್ರೀಡಾ ಕಾರ್ಯದರ್ಶಿ ಪ್ರಣವ್ ಪಿ. ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ದೀಪು ಎಸ್. ಉಪಸ್ಥಿತರಿದ್ದರು.
ಉಪನ್ಯಾಸಕರು ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎ.ಎಂ. ಡಯಾನ ಸೋಮಯ್ಯ ಸ್ವಾಗತಿಸಿ, ಉಪನ್ಯಾಸಕರಾದ ಅನುಪಮಾ ಸಿ.ಪಿ ಮತ್ತು ವಿದ್ಯಾರ್ಥಿಗಳಾದ ನಫೀಯ, ವರ್ಷ, ನಿರೂಪಿಸಿದರು, ಜೀವಶಾಸ್ತç ವಿಭಾಗದ ಉಪನ್ಯಾಸಕರಾದ ದೀಕ್ಷಿತ್ ಅಕ್ಕಮ್ಮ ಅವರು ವಂದಿಸಿದರು.
ಕಾವೇರಿ ಪದವಿಪೂರ್ವ ಮತ್ತು ಪದವಿ ಕಾಲೇಜಿನ ಉಪನ್ಯಾಸಕ ವೃಂದ, ಬೋಧಕೇತರ ವರ್ಗ, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.