ಮುಳ್ಳೂರು, ಜ. ೪: ದೇಶ ವ್ಯಾಪ್ತಿಯಾಗಿ ಹಮ್ಮಿಕೊಂಡಿರುವ ವಿಕಸಿತ ಸಂಕಲ್ಪ ಯಾತ್ರೆ ಸಂಚಾರ ಮಾಹಿತಿ ಕಾರ್ಯಕ್ರಮ ಶನಿವಾರ ಸಂತೆ ನಾಡ ಕಚೇರಿ ಆವರಣದ ಮುಂಭಾಗ ದಲ್ಲಿ ನಡೆಯಿತು.

ಮಾಹಿತಿ ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾ.ಪಂ. ಉಪಾಧ್ಯಕ್ಷ ಸರ್ದಾರ್ ಅಹಮ್ಮದ್ ಉದ್ಘಾಟಿಸಿದರು. ಮಾಹಿತಿ ಕಾರ್ಯಕ್ರಮದಲ್ಲಿ ಅನುಷ್ಠಾನಗೊಂಡಿರುವ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್, ಗ್ಯಾಸ್ ಸಬ್ಸಿಡಿ, ಆಹಾರ ಭದ್ರತೆ, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಸುರಕ್ಷಾ ಬಿಮಾ ಯೋಜನೆ, ಜೀವನ್ ಜ್ಯೋತಿ ಯೋಜನೆ, ಅಟಲ್ ಪಿಂಚಣಿ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ, ಉಜ್ವಲ ಯೋಜನೆಗಳು ಸೇರಿದಂತೆ ಅನುಷ್ಠಾನದಲ್ಲಿರುವ ನೂರಾರು ಯೋಜನೆಗಳ ಮಾಹಿತಿಯನ್ನು ಸಂಚಾರ ವಾಹನದಲ್ಲಿ ಅಳವಡಿಸಿ ರುವ ಎಲ್‌ಇಡಿ ಮೂಲಕ ಪ್ರದರ್ಶಿಸಲಾಯಿತು.

ಯೂನಿಯನ್ ಬ್ಯಾಂಕ್ ಮೂಲಕ ವಿದ್ಯಾರ್ಥಿಗಳು, ನಿರುದ್ಯೋಗಿ ವಿದ್ಯಾವಂತ ಯುವಕ-ಯುವತಿಯರಿಗೆ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿದಂತೆ ರೈತರಿಗೆ, ಬಡ ಜನರಿಗೆ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಶನಿವಾರಸಂತೆ ಯೂನಿಯನ್ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಆಶ್ರಯತ್ ಪ್ರಭು ಮಾಹಿತಿ ನೀಡಿದರೆ, ಕಾವೇರಿ ಗ್ರಾಮೀಣ ಬ್ಯಾಂಕ್‌ನಿAದ ದೊರೆಯುವ ಸಾಲ ಸೌಲಭ್ಯಗಳ ಕುರಿತು ಶನಿವಾರಸಂತೆ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ರಂಜಿತ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ಎಸ್.ಎನ್. ರಘು ಜಿ.ಪಂ. ಮಾಜಿ ಸದಸ್ಯೆ ಸರೋಜಮ್ಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಎಸ್.ಎನ್. ಪಾಂಡು, ಕೆ.ಪಿ. ಜಯಕುಮಾರ್ ಮುಂತಾದವರು ಇದ್ದರು.