- ಕೆ.ಎಂ. ಇಸ್ಮಾಯಿಲ್ ಕಂಡಕರೆ

ಮಡಿಕೇರಿ, ಜ. ೪: ೨೦೨೩ನೇ ವರ್ಷ ಕೊಡಗು ಜಿಲ್ಲೆ ಇಡೀ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಹಾಗೂ ಚರ್ಚೆಗೆ ಕಾರಣವಾದ ಜಿಲ್ಲೆ. ರಾಜಕೀಯ ಚರ್ಚೆಗಳಿಂದ ಒಂದು ಹೆಜ್ಜೆ ದೂರವಿರುವ ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ, ರಾಜ್ಯ ರಾಜಕೀಯದಲ್ಲಿ ಕೌತುಕ ಸೃಷ್ಟಿಸಿತ್ತು.

ಕೊಡಗಿನ ಎರಡು ಕ್ಷೇತ್ರಗಳನ್ನು ಕಳೆದ ಎರಡು ದಶಕಗಳಿಂದ ಬಿಜೆಪಿ ತನ್ನ ಭದ್ರಕೋಟೆಯನ್ನಾಗಿ ಉಳಿಸಿಕೊಂಡಿತ್ತು.

ಆದರೆ ೨೦೨೩ ಮೇ ೧೩ ರಂದು ಪ್ರಕಟಗೊಂಡ ಫಲಿತಾಂಶದಲ್ಲಿ ಬಿಜೆಪಿ ತನ್ನ ಎರಡು ಶಾಸಕರನ್ನು ಕಳೆದುಕೊಳ್ಳುವುದರೊಂದಿಗೆ ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿತ್ತು.

೨೦೨೩ ರಲ್ಲಿ ಜಿಲ್ಲೆಯ ರಾಜಕೀಯದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಸಿಕ್ಕರೆ, ಕಾಂಗ್ರೆಸ್ ತನ್ನ ಹಳೆಯ ಭದ್ರಕೋಟೆಯನ್ನು ವಶಪಡಿಸಿಕೊಂಡು, ಕೊಡಗಿನಲ್ಲಿ ಮರುಜೀವ ಪಡೆದಿತ್ತು.

ಆದರೆ ಜೆಡಿಎಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಇದೀಗ ೨೦೨೪ ಬಂದರೂ ಸಹಾ ನಾವಿಕನಿಲ್ಲದ ಹಡಗಿನಂತಾಗಿದೆ.

೨೦೨೩ ಕೊಡಗಿನ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ಸಿಹಿ ಕೊಟ್ಟರೆ ,ಬಿಜೆಪಿ ಹಾಗೂ ಜೆ.ಡಿ.ಎಸ್.ಗೆ ಕಹಿಕೊಟ್ಟಿದೆ.

ಭದ್ರಕೋಟೆ ಮರಳಿ ಪಡೆದ ಕಾಂಗ್ರೆಸ್!

ಕಾAಗ್ರೆಸ್ ಪಕ್ಷದಿಂದ ವೀರಾಜಪೇಟೆ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಜನಸೇವೆ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಎ.ಎಸ್. ಪೊನ್ನಣ್ಣ ಅವರಿಗೆ ಟಿಕೆಟ್ ಬಹುತೇಕ ಒಂದು ವರ್ಷದ ಹಿಂದೆಯೇ ಖಚಿತಗೊಂಡಿತ್ತು.

ಕಾAಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯಲ್ಲೇ ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ಎಸ್. ಪೊನ್ನಣ್ಣ ಅವರಿಗೆ ಟಿಕೆಟ್ ಘೋಷಿಸಿತ್ತು. ಆದರೆ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಗೊಂದಲವಿತ್ತು.

ಬಿ.ಎ. ಜೀವಿಜಯ, ಹೆಚ್.ಎಸ್. ಚಂದ್ರಮೌಳಿ ಹಾಗೂ ಡಾ ಮಂಥರ್ ಗೌಡ ಅವರು ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದರು.

ಕಾAಗ್ರೆಸ್ ತನ್ನ ಎರಡನೇ ಪಟ್ಟಿಯಲ್ಲಿ ಡಾ. ಮಂಥರ್ ಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿತ್ತು.

ಎಂ.ಎಲ್.ಸಿ. ಚುನಾವಣೆಯ ಸೋಲಿನ ನಂತರ ಡಾ. ಮಂಥರ್ ಗೌಡ ಅವರು, ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸಿದ್ದರು ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿದ್ದ ವಿವಿಧ ಕ್ರೀಡಾಕೂಟಗಳು ಹಾಗೂ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಿ, ಜನರಿಗೆ ಮತ್ತಷ್ಟು ಹತ್ತಿರವಾಗಿದ್ದರು.

ಡಾ. ಮಂಥರ್ ಗೌಡ ಅವರಿಗೆ ಮಡಿಕೇರಿ ಕ್ಷೇತ್ರದ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಪಾಳಯದಲ್ಲೇ ದೊಡ್ಡ ವಿರೋಧವಿತ್ತು. ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡದೆ, ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ - ಕೆ.ಎಂ. ಇಸ್ಮಾಯಿಲ್ ಕಂಡಕರೆ

ಮಡಿಕೇರಿ, ಜ. ೪: ೨೦೨೩ನೇ ವರ್ಷ ಕೊಡಗು ಜಿಲ್ಲೆ ಇಡೀ ರಾಜ್ಯ ರಾಜಕೀಯದಲ್ಲಿ ಅಚ್ಚರಿ ಹಾಗೂ ಚರ್ಚೆಗೆ ಕಾರಣವಾದ ಜಿಲ್ಲೆ. ರಾಜಕೀಯ ಚರ್ಚೆಗಳಿಂದ ಒಂದು ಹೆಜ್ಜೆ ದೂರವಿರುವ ಕೊಡಗು ಜಿಲ್ಲೆಯಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ, ರಾಜ್ಯ ರಾಜಕೀಯದಲ್ಲಿ ಕೌತುಕ ಸೃಷ್ಟಿಸಿತ್ತು.

ಕೊಡಗಿನ ಎರಡು ಕ್ಷೇತ್ರಗಳನ್ನು ಕಳೆದ ಎರಡು ದಶಕಗಳಿಂದ ಬಿಜೆಪಿ ತನ್ನ ಭದ್ರಕೋಟೆಯನ್ನಾಗಿ ಉಳಿಸಿಕೊಂಡಿತ್ತು.

ಆದರೆ ೨೦೨೩ ಮೇ ೧೩ ರಂದು ಪ್ರಕಟಗೊಂಡ ಫಲಿತಾಂಶದಲ್ಲಿ ಬಿಜೆಪಿ ತನ್ನ ಎರಡು ಶಾಸಕರನ್ನು ಕಳೆದುಕೊಳ್ಳುವುದರೊಂದಿಗೆ ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿತ್ತು.

೨೦೨೩ ರಲ್ಲಿ ಜಿಲ್ಲೆಯ ರಾಜಕೀಯದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಸಿಕ್ಕರೆ, ಕಾಂಗ್ರೆಸ್ ತನ್ನ ಹಳೆಯ ಭದ್ರಕೋಟೆಯನ್ನು ವಶಪಡಿಸಿಕೊಂಡು, ಕೊಡಗಿನಲ್ಲಿ ಮರುಜೀವ ಪಡೆದಿತ್ತು.

ಆದರೆ ಜೆಡಿಎಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಇದೀಗ ೨೦೨೪ ಬಂದರೂ ಸಹಾ ನಾವಿಕನಿಲ್ಲದ ಹಡಗಿನಂತಾಗಿದೆ.

೨೦೨೩ ಕೊಡಗಿನ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ಸಿಹಿ ಕೊಟ್ಟರೆ ,ಬಿಜೆಪಿ ಹಾಗೂ ಜೆ.ಡಿ.ಎಸ್.ಗೆ ಕಹಿಕೊಟ್ಟಿದೆ.

ಭದ್ರಕೋಟೆ ಮರಳಿ ಪಡೆದ ಕಾಂಗ್ರೆಸ್!

ಕಾAಗ್ರೆಸ್ ಪಕ್ಷದಿಂದ ವೀರಾಜಪೇಟೆ ಕ್ಷೇತ್ರದಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಜನಸೇವೆ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಎ.ಎಸ್. ಪೊನ್ನಣ್ಣ ಅವರಿಗೆ ಟಿಕೆಟ್ ಬಹುತೇಕ ಒಂದು ವರ್ಷದ ಹಿಂದೆಯೇ ಖಚಿತಗೊಂಡಿತ್ತು.

ಕಾAಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯಲ್ಲೇ ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ಎಸ್. ಪೊನ್ನಣ್ಣ ಅವರಿಗೆ ಟಿಕೆಟ್ ಘೋಷಿಸಿತ್ತು. ಆದರೆ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಗೊಂದಲವಿತ್ತು.

ಬಿ.ಎ. ಜೀವಿಜಯ, ಹೆಚ್.ಎಸ್. ಚಂದ್ರಮೌಳಿ ಹಾಗೂ ಡಾ ಮಂಥರ್ ಗೌಡ ಅವರು ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದರು.

ಕಾAಗ್ರೆಸ್ ತನ್ನ ಎರಡನೇ ಪಟ್ಟಿಯಲ್ಲಿ ಡಾ. ಮಂಥರ್ ಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿತ್ತು.

ಎಂ.ಎಲ್.ಸಿ. ಚುನಾವಣೆಯ ಸೋಲಿನ ನಂತರ ಡಾ. ಮಂಥರ್ ಗೌಡ ಅವರು, ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸಿದ್ದರು ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿದ್ದ ವಿವಿಧ ಕ್ರೀಡಾಕೂಟಗಳು ಹಾಗೂ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಿ, ಜನರಿಗೆ ಮತ್ತಷ್ಟು ಹತ್ತಿರವಾಗಿದ್ದರು.

ಡಾ. ಮಂಥರ್ ಗೌಡ ಅವರಿಗೆ ಮಡಿಕೇರಿ ಕ್ಷೇತ್ರದ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಪಾಳಯದಲ್ಲೇ ದೊಡ್ಡ ವಿರೋಧವಿತ್ತು. ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡದೆ, ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಆದರೆ ಈ ೨೦೨೩ ರ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಾಣಬೇಕಾಯಿತು.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ನಾಪಂಡ ಮುತ್ತಪ್ಪವರಿಗೆ ಮಡಿಕೇರಿ ಕ್ಷೇತ್ರದ ಟಿಕೆಟ್ ನೀಡುವುದಕ್ಕೆ ಜೆಡಿಎಸ್ ಪಕ್ಷದಲ್ಲಿ ಕೆ.ಎಂ.ಬಿ. ಗಣೇಶ್ ಬಣ ವಿರೋಧ ಮಾಡುತ್ತಲೇ ಬಂದಿತ್ತು.

ಒಕ್ಕಲಿಗ ಅಭ್ಯರ್ಥಿಗಾಗಿ ಜೆಡಿಎಸ್ ಹುಡುಕಾಡುತ್ತಲೇ ಇತ್ತು. ಆದರೆ ಇದುವರೆಗೆ ಜೆಡಿಎಸ್ ಗೆ ಕೊಡಗಿನಲ್ಲಿ ಜೆಡಿಎಸ್ ಪಕ್ಷವನ್ನು ಮುನ್ನಡೆಸಲು ಸೂಕ್ತ ನಾವಿಕನೇ ಸಿಗದೇ, ಅತಂತ್ರ ಸ್ಥಿತಿಯಲ್ಲಿ ಸಿಲುಕಿಕೊಂಡಿವೆ.

ಜೆಡಿಎಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕಿಂತ ಮೊದಲೇ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದರೂ, ಕೊಡಗಿನ ಎರಡು ಸ್ಥಾನಗಳಿಗೆ ಟಿಕೆಟ್ ಘೋಷಿಸಿರಲಿಲ್ಲ.

ಒಂದು ವೇಳೆ ಕಾಂಗ್ರೆಸ್ ಪಕ್ಷದಿಂದ ಡಾ ಮಂಥರ್ ಗೌಡ ಅವರಿಗೆ ಟಿಕೆಟ್ ಕೈ ತಪ್ಪಿದರೆ ಜೆಡಿಎಸ್ ಮಡಿಕೇರಿ ಕ್ಷೇತ್ರ ಅಭ್ಯರ್ಥಿಯನ್ನಾಗಿ ಮಂಥÀರ್ ಗೌಡ ಅವರಿಗೆ ಟಿಕೆಟ್ ನೀಡಲು ತಂತ್ರ ರೂಪಿಸಲಾಗಿತ್ತು. ಆದರೆ ಕಾಂಗ್ರೆಸ್ ಪಕ್ಷ ಮಂಥರ್ ಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರಿಂದ ಈ ಬೆಳವಣಿಗೆ ನಡೆಯಲಿಲ್ಲ.

ಜೆಡಿಎಸ್ ಪಕ್ಷವು ನಾಮಪತ್ರ ಸಲ್ಲಿಸಲು ೩ ದಿನ ಬಾಕಿಯಿರುವಾಗ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಪಂಡ ಮುತ್ತಪ್ಪ ಹಾಗೂ ವಿರಾಜಪೇಟೆ ಕ್ಷೇತ್ರಕ್ಕೆ ಎಂ.ಎ ಮನ್ಸೂರ್ ಆಲಿ ಅವರನ್ನು ಅಂತಿಮಗೊಳಿಸಿತ್ತು.

ಮಡಿಕೇರಿ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಿಂತ ಮುಂದೆ ಇದ್ದ, ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪನವರು ಚುನಾವಣೆಗೆ ಒಂದು ದಿನ ಬಾಕಿಯಿರುವ ತಟಸ್ಥರಾಗಿ ಉಳಿದರು.

ಇದರಿಂದ ಜೆಡಿಎಸ್ ಪಕ್ಷದ ಮತಗಳು ಕಾಂಗ್ರೆಸ್ ಪರವಾಗಿ ಚಲಾವಣೆ ಆಯಿತು. ವೀರಾಜಪೇಟೆ ಕ್ಷೇತ್ರದಲ್ಲಿ ಎಂ.ಎ ಮನ್ಸೂರ್ ಆಲಿ ಕೂಡ ತಟಸ್ಥರಾಗಿ ಉಳಿದುಬಿಟ್ಟಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷನಾಗಿದ್ದ ಕೆ.ಎಂ ಗಣೇಶ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ,ಇದೀಗ ಕಾಂಗ್ರೆಸ್ ಸೇರಲು ಸಜ್ಜುಗೊಂಡಿದ್ದಾರೆ.

ಅಬ್ಬರದಲ್ಲೇ ನಾಮಪತ್ರ ಸಲ್ಲಿಸಿದ್ದ ಎಸ್.ಡಿ.ಪಿ.ಐ ಅಭ್ಯರ್ಥಿ ಅಮೀನ್ ಮೊಹಿಸಿನ್ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿರಲಿಲ್ಲ.

೫ ಸಾವಿರ ಮತಗಳನ್ನು ಎಸ್.ಡಿ.ಪಿ.ಐ ಪಡೆಯಬಹುದೆಂದು ಅಂದಾಜಿಸಲಾಗಿತ್ತು, ಆದರೆ ಕೇವಲ ಸಾವಿರ ಮತಗಳಿಗೆ ಎಸ್.ಡಿ.ಪಿ.ಐ. ಮಡಿಕೇರಿ ಕ್ಷೇತ್ರದಲ್ಲಿ ಸೀಮಿತಗೊಂಡಿತ್ತು. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಮತಗಳು ವಿಭಜನೆಯಾಗದೆ, ಕಾಂಗ್ರೆಸ್ ಪರವಾಗಿ ಚಲಾವಣೆಯಾಗಿತ್ತು.

ಎರಡು ದಶಕಗಳ ಬಳಿಕ ಕೊಡಗಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಅದಲ್ಲದೇ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಪಕ್ಷ ಅಧಿಕಾರಿ ಚುಕ್ಕಾಣಿ ಹಿಡಿದಿತ್ತು.

ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ನೀಡುವುದು ಖಚಿತವಾಗಿತ್ತು. ಸಂಭ್ಯಾವ ಸಚಿವ ಪಟ್ಟಿಯಲ್ಲಿ ಎ.ಎಸ್. ಪೊನ್ನಣ್ಣ ಅವರ ಹೆಸರು ಕೂಡ ಇತ್ತು.

ಕೊಡಗಿನವರೇ ಕೊಡಗಿನ ಉಸ್ತುವಾರಿ ಸಚಿವ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಜಿಲ್ಲೆಯ ಜನತೆ ಪಕ್ಷಾತೀತವಾಗಿ ಸಂತೋಷ ಪಟ್ಟಿದ್ದರು. ಆದರೆ ಅಂತಿಮವಾಗಿ ಅಚ್ಚರಿಯಂತೆ ಕೊಡಗಿಗೆ ಸಚಿವ ಸ್ಥಾನ ನೀಡಲೇ ಇಲ್ಲ. ಮತ್ತೊಮ್ಮೆ ಕೊಡಗಿಗೆ ‘ಗೆಸ್ಟ್’ ಉಸ್ತುವಾರಿ ಸಚಿವರ ಆಗಮನವಾಯಿತು. ಉಸ್ತುವಾರಿ ಸಚಿವರು ಕೊಡಗಿನಲ್ಲಿ ಕಾಂಗ್ರೆಸ್ ಶಾಸಕರೇ ಗೆಲುವು ಸಾಧಿಸಿರುವುದರಿಂದ, ಇದೀಗ ಬರೀ ಕೆಡಿಪಿ ಸಭೆಗೆ ಸೀಮಿತವಾದಂತೆ ಕಾಣುತ್ತಿವೆ.

ಸಚಿವ ಸ್ಥಾನ ಕೈ ತಪ್ಪಿದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಸಂಪುಟ ದರ್ಜೆ ಸ್ಥಾನಮಾನ ನೀಡಲಾಯಿತು.

ಒಟ್ಟಿನಲ್ಲಿ ಕೊಡಗಿನ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಹಿ, ಬಿಜೆಪಿಗೆ ದೊಡ್ಡ ಹೊಡೆತ ಹಾಗೂ ತೆನೆ ಹೊತ್ತ ಮಹಿಳೆಗೆ ೨೦೨೩ ರಲ್ಲಿ ನಾವಿಕನಿಲ್ಲದ ಹಡಗಿನಂತಾಗಿದೆ.