ಕುಶಾಲನಗರ, ಜ. ೪: ಜಿಲ್ಲೆಯ ಕೆಲವು ಕಡೆ ಕಾಫಿ ತೋಟಗಳಲ್ಲಿ ಶುಂಠಿ ಬೆಳೆಯುವ ನೆಪದಲ್ಲಿ ಭಾರಿ ಪ್ರಮಾಣದ ಮರ ನಾಶವಾಗುತ್ತಿರುವ ಬಗ್ಗೆ ಕೂಡಲೇ ಅರಣ್ಯ ಇಲಾಖೆ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ಮರ ಹನನ ಆಗದಂತೆ ಅರಣ್ಯ ಅಧಿಕಾರಿಗಳು ಗಮನ ಹರಿಸಬೇಕು. ಈ ಸಂಬAಧ ಸದ್ಯದಲ್ಲೇ ಸಭೆ ಕರೆದು ಚರ್ಚೆ ನಡೆಸಲಾಗುವುದು. ಮರಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಕೊಡಗರಹಳ್ಳಿ ಬಳಿ ಎಸ್ಟೇಟ್ ಸೇರಿದಂತೆ ವಿವಿಧೆsÀಡೆ ನಡೆದಿರುವ ಮರಗಳ ನಾಶದ ಬಗ್ಗೆ ‘ಶಕ್ತಿ’ಯಲ್ಲಿ ಪ್ರಕಟಗೊಂಡ ವರದಿಗೆ ಸಂಬAಧಿಸಿದAತೆ ಈಗಾಗಲೇ ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಿAದ ವರದಿ ಲಭಿಸಿದೆ. ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ ಭಾಸ್ಕರ್ ‘ಶಕ್ತಿ’ಗೆ ತಿಳಿಸಿದ್ದಾರೆ.

ಯಾವುದೇ ಭಾಗದಲ್ಲಿ ಅಕ್ರಮವಾಗಿ ಮರಗಳ ನಾಶ ಆಗದಂತೆ ಸಂಬAಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. -ಸಿಂಚು