ಮಡಿಕೇರಿ, ಜ. ೪: ನಗರದ ಗಾಂಧಿ ಮಂಟಪದಲ್ಲಿ ನಿರ್ಮಾಣ ವಾಗುತ್ತಿರುವ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಸ್ಮಾರಕ ಉದ್ಯಾನ ವನ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಪರಿಶೀಲಿಸಿದರು.

ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಜೊತೆಗೆ ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿ ಸುವಂತೆ ನಿರ್ದೇಶನ ನೀಡಿದರು.

ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ೫೦ ಲಕ್ಷ ರೂ. ಬಿಡುಗಡೆ ಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ ಸಹ ೫ ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭ ಹೇಳಿದರು.

ಮಡಿಕೇರಿ ಶಾಸಕರಾದ ಡಾ. ಮಂಥರ್‌ಗೌಡ ಮಾತನಾಡಿ, ಕಾಮ ಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಶಾಸಕರ ಅನುದಾನದಡಿ ಸಾಧ್ಯವಾದಷ್ಟು ೧೦ ಲಕ್ಷ ರೂ. ವರೆಗೆ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಸರ್ಕಾರ ದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿ ಯಿಂದ ಅನುದಾನ ಒದಗಿಸುವುದರ ಜೊತೆಗೆ ಮತ್ತಷ್ಟು ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಕೋರಿದರು.

ಗಾಂಧಿ ಸ್ಮಾರಕ ಉದ್ಯಾನವನ ವನ್ನು ರಾಜ್‌ಘಾಟ್ ಮಾದರಿಯಲ್ಲಿ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಆಕರ್ಷ ಣೀಯ ಕೇಂದ್ರವಾಗಿ ಗಾಂಧಿ ಸ್ಮಾರಕ ಉದ್ಯಾನವನ್ನು ಮಾದರಿಯಾಗಿ ನಿರ್ಮಿಸಬೇಕು ಎಂದು ಟಿ.ಪಿ.ರಮೇಶ್ ಕೋರಿದರು.

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಮಹಾತ್ಮ ಗಾಂಧಿ ಸ್ಮಾರಕ ಉದ್ಯಾನವನ ಸಂಬAಧಿಸಿದAತೆ ನೀಲಿನಕಾಶೆ ಬಗ್ಗೆ ಮಾಹಿತಿ ನೀಡಿದರು.

ಸರ್ವೋದಯ ಸಮಿತಿ ಅಧ್ಯಕ್ಷ ರಾದ ಅಂಬೆಕಲ್ಲು ಕುಶಾಲಪ್ಪ, ಸದಸ್ಯರಾದ ಮುನೀರ್ ಅಹಮದ್, ನಿರ್ಮಿತಿ ಕೇಂದ್ರದ ಇಂಜಿನಿಯರ್ ರಾಘವೇಂದ್ರ, ಪ್ರಮುಖರಾದ ಕಾರ್ಯಪ್ಪ, ಇತರರು ಇದ್ದರು.