ಮಡಿಕೇರಿ, ಜ. ೬: ನಾಡಕಚೇರಿಯ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ದೊರೆಯುತ್ತಿದ್ದ ಸೇವೆಗಳು ಇದೀಗ ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ದೊರೆಯಲಿವೆ.
ಈ ಕುರಿತು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್ ಹಾಗೂ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯ ಜಂಟಿ ಆದೇಶ ಹೊರಡಿಸಿದ್ದಾರೆ.
ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಕಂದಾಯ ಇಲಾಖೆಯ ಮಡಿಕೇರಿ, ಜ. ೬: ನಾಡಕಚೇರಿಯ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ದೊರೆಯುತ್ತಿದ್ದ ಸೇವೆಗಳು ಇದೀಗ ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ದೊರೆಯಲಿವೆ.
ಈ ಕುರಿತು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್ ಹಾಗೂ ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯ ಜಂಟಿ ಆದೇಶ ಹೊರಡಿಸಿದ್ದಾರೆ.
ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಕಂದಾಯ ಇಲಾಖೆಯ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರಗಳಂತಹ ಪ್ರಾಮುಖ್ಯ ಸೇವೆಗಳನ್ನು ಮತ್ತು ಇನ್ನೂ ಮುಂತಾದ ೪೪ ಅಟಲ್ಜೀ ಜನಸ್ನೇಹಿ ಕೇಂದ್ರಗಳ ಸೇವೆಗಳಿಗೆ ಅರ್ಜಿ ಸಲ್ಲಿಸಿ, ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸೇವೆಗಳನ್ನು ಪಡೆಯಬಹುದಾಗಿದೆ.
ಪ್ರತಿಯೊಂದು ಸೇವೆಗಳಿಗೆ ಅರ್ಜಿದಾರರಿಂದ ವಿವಿಧ ಪ್ರಮಾಣ ಪತ್ರಗಳಿಗಾಗಿ ಪಡೆಯಬೇಕಾಗಿರುವ ದಾಖಲೆಗಳನ್ನು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆದು ನೀಡಲಾಗಿರುವ ನಾಡಕಚೇರಿ ತಂತ್ರಾAಶದ ಲಾಗಿನ್ನಲ್ಲಿ ‘ಅಪ್ಲೋಡ್’ ಮಾಡಿ ಅರ್ಜಿಗಳನ್ನು ‘ಆನ್-ಲೈನ್’ನಲ್ಲಿ ಸಲ್ಲಿಸಲಾಗುತ್ತಿದೆ.
ಕ್ಷೇತ್ರ ಪರಿಶೀಲನೆಗಾಗಿ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ತಂತ್ರಾAಶದ ಲಾಗಿನ್ ಮೂಲಕ ಆನ್-ಲೈನ್ನಲ್ಲಿ ಸಲ್ಲಿಸಲಾಗುತ್ತಿರುವ ಅರ್ಜಿಗಳನ್ನು ಮತ್ತು ಅವುಗಳ ದಾಖಲೆಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳನ್ನು ಕೋರುತ್ತಿರುವುದು ಸರ್ಕಾರದ ಗಮನಕ್ಕೆ ಕಂಡುಬAದಿದೆ.
ಆದುದರಿAದ, ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ತಂತ್ರಾAಶದ ಲಾಗಿನ್ ಮೂಲಕ ಆನ್-ಲೈನ್ನಲ್ಲಿ ಸಲ್ಲಿಸಲಾಗುತ್ತಿರುವ ಅರ್ಜಿಗಳಿಗೆ ಯಾವುದೇ ದಾಖಲೆಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳನ್ನು ಕೋರಬಾರದು ಹಾಗೂ ಕ್ಷೇತ್ರ ಪರಿಶೀಲನೆಗಾಗಿ ಅವಶ್ಯವಿರುವ ಅರ್ಜಿಗಳನ್ನು ಮತ್ತು ಅವುಗಳ ದಾಖಲೆಗಳನ್ನು ತಂತ್ರಾAಶದಿAದ ಪಡೆದು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಲು ಸೂಚಿಸಿದೆ ಎಂದು ಅಧಿಕಾರಿಗಳು ಆದೇಶದ ಮೂಲಕ ಮಾಹಿತಿ ನೀಡಿದ್ದಾರೆ.