ಮಡಿಕೇರಿ, ಜ. ೬: ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಮೃತ ನಗ ರೋತ್ಥಾನ ಯೋಜನಾ ಕಾಮಗಾರಿ ಯನ್ನು ಶನಿವಾರ ಪರಿಶೀಲಿಸಿದರು.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಯವರ ಅಮೃತ ನಗರೋ ತ್ಥಾನ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ಹಾಗೂ ಪಿಎಂಸಿ ಅವರ ಜೊತೆ ಸ್ಥಳ ಪರಿಶೀಲಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ರಾಜಕಾಲುವೆಗೆ ನಿರ್ಮಿಸ ಲಾದ ಮಳೆ ನೀರು ಚರಂಡಿ, ವಾರ್ಡ್ ನಂ ೧ರ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ವಾರ್ಡ್ ನಂ.೫ ರಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು ಹಾಗೂ ಸ್ಥಳದಲ್ಲಿಯೇ ಕೋರ್ ಕಟ್ಟಿಂಗ್ ಮಾಡಿಸಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು.
ಗುಣಮಟ್ಟದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರಿಕೆವಹಿಸಿ ಕಾಮಗಾರಿ ನಿರ್ವಹಿಸುವಂತೆ ಕಾಮ ಗಾರಿಗಳ ಉಸ್ತುವಾರಿ ಹೊತ್ತಿರುವ ಕಾರ್ಯಪಾಲಕ ಅಭಿಯಂತರರು ಮತ್ತು ಪಿ.ಎಂ.ಸಿರವರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಕಾರ್ಯಪಾಲಕ ಅಭಿಯಂತರ ಶಿವಪ್ರಕಾಶ್ ಕುಮಾರ್, ಪೌರಾಯುಕ್ತ ವಿಜಯ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪ್ರಬಾರ) ಹೇಮಕುಮಾರ್ ಮತ್ತು ಸಹಾಯಕ ಅಭಿಯಂತರರಾದ ರಂಗರಾಮ್, ಇತರರು ಇದ್ದರು.