ಪೊನ್ನಂಪೇಟೆ, ಜ. ೬: ತಿತಿಮತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸ್ಥಳೀಯ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಡ್ಸೆಟ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಸಂಘದ ಅಧ್ಯಕ್ಷ ಚೆಪ್ಪುಡೀರ ಎಂ. ರಾಮಕೃಷ್ಣ ಅವರು ಸಂಘದ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬ್ಯಾಂಡ್ಸೆಟ್ ಅನ್ನು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಮಂಗಳ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ತಿತಿಮತಿ ಫ್ಯಾಕ್ಸ್ ಉಪಾಧ್ಯಕ್ಷ ಪಾಲೆಂಗಡ ಜೆ. ನಂಜಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಎಸ್. ಸುಬ್ರಮಣಿ, ತಿತಿಮತಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್, ತಿತಿಮತಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಸಿ.ಎಂ. ರಾಘವೇಂದ್ರ, ಶಿಕ್ಷಕ ಪ್ರಸಾದ್ ಮತ್ತಿತರರು ಇದ್ದರು.