ಮಡಿಕೇರಿ, ಜ. ೬: ಜವಳಿ ಅಭಿವೃದ್ಧಿ ಆಯುಕ್ತಾಲಯ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ‘ಕಾವೇರಿ ವಸ್ತçಸಿರಿ’ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಚರಕದಲ್ಲಿ ಕಣಿಕೆ ಸುತ್ತುವ ಮೂಲಕ ಚಾಲನೆ ನೀಡಿದರು.
ನಗರದ ಗಾಂಧಿ ಮೈದಾನದಲ್ಲಿ ಒಂದು ವಾರಗಳ ಕಾಲ ತಾ. ೧೨ ವರೆಗೆ ಈ ಮೇಳ ಏರ್ಪಡಿಸಲಾಗಿದೆ. ಅನಿತಾ ಪೂವಯ್ಯ ಮಾತನಾಡಿ, ಆಧುನಿಕತೆ ಬೆಳೆದಂತೆ ಕೈಮಗ್ಗ ನೇಕಾರರು ಸಂಕಷ್ಟವನ್ನು ಎದುರಿಸುತ್ತಿದ್ದು, ಕೈಮಗ್ಗ ನೇಕಾರರಿಗೆ ಸರ್ಕಾರದಿಂದ ಹಲವು ಸಹಾಯಧನ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಪಿ.ಎಂ. ವಿಶ್ವಕರ್ಮ ಯೋಜನೆಯಡಿ ನೇಕಾರರಿಗೆ ಸಹಾಯಧನದಡಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಕೈಮಗ್ಗ ಉತ್ಪನ್ನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಇಂದಿನ ಕೂಲಿಯನ್ನು ಗಮನಿಸಿದರೂ ಸಹ ಕನಿಷ್ಟ ರೂ. ೫೦೦ ಸಿಗುತ್ತದೆ. ಅಂತಹದ್ದಲ್ಲಿ ಒಂದು ಸೀರೆ ತಯಾರು ಮಾಡಲು ಕನಿಷ್ಟ ಎರಡು ದಿನ ಬೇಕಾಗುತ್ತದೆ. ಆದ್ದರಿಂದ ನೇಕಾರರಿಗೆ ಮತ್ತಷ್ಟು ಸಹಾಯಧನ ದೊರೆಯಬೇಕಿದೆ ಎಂದು ನಗರಸಭಾಧ್ಯಕ್ಷರು ಹೇಳಿದರು.
ಕರಕುಶಲ ಕರ್ಮಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿಯೊಂದಿಗೆ ಮಾನ್ಯತೆ ನೀಡಲಾಗುತ್ತದೆ. ಕೌಶಲ್ಯ, ಉನ್ನತೀಕರಣ, ಟೂಲ್ ಕಿಟ್ ಪ್ರೋತ್ಸಾಹ, ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್ ಬೆಂಬಲವನ್ನು ಒದಗಿಸುತ್ತದೆ. ಕ್ರೆಡಿಟ್ ಬೆಂಬಲವನ್ನು ಶೇ. ೫ ರಷ್ಟು ರಿಯಾಯಿತಿ ಬಡ್ಡಿಯ ದರದಲ್ಲಿ ೧ ಲಕ್ಷ (ಒಂದನೇ ಕಂತು) ಮತ್ತು ೨ ಲಕ್ಷ (೨ನೇ ಕಂತು) ಪ್ರೋತ್ಸಾಹವನ್ನು ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದರು. ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್ ಮಾತನಾಡಿ, ಆಧುನಿಕತೆಗೆ ಹೊಂದಿಕೊAಡು ಕೈಮಗ್ಗವನ್ನು ಉಳಿಸಿಕೊಂಡು ಬರಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ಮಾತನಾಡಿ, ಸರ್ಕಾರದಿಂದ ಪ್ರತಿವರ್ಷ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದೆ. ಶೇ. ೨೦ ರಷ್ಟು ರಿಯಾಯಿತಿ ದರದಲ್ಲಿ ಕೈಮಗ್ಗ ಉತ್ಪನ್ನಗಳು ಗ್ರಾಹಕರಿಗೆ ದೊರೆಯಲಿವೆ ಎಂದು ಮಾಹಿತಿ ನೀಡಿದರು.
ಚಿಕ್ಕಬಳ್ಳಾಪುರ, ಬೆಂಗಳೂರು, ತುಮಕೂರು, ಚಾಮರಾಜನಗರ, ಹಾಸನ, ಗುಬ್ಬಿ, ಶಿವಮೊಗ್ಗ, ಬಾಗಲಕೋಟೆ, ಗದಗ ಜಿಲ್ಲೆಯ ಲಕ್ಷೆö್ಮÃಶ್ವರ, ಕೊಡಗು ಜಿಲ್ಲೆಯ ಕುಶಾಲನಗರ, ಪೊನ್ನಂಪೇಟೆ, ಹೀಗೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಕೈಮಗ್ಗ ನೇಕಾರರು ಆಗಮಿಸಿ ೨೦ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ನಗರಸಭಾ ಸದಸ್ಯ ಅಪ್ಪಣ್ಣ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಝೀವಲ್ ಖಾನ್, ಪೊನ್ನಂಪೇಟೆ ನೇಕಾರರ ಸಹಕಾರ ಸಂಘದ ಅಧ್ಯಕ್ಷ ಪಿ.ಕೆ. ದೇವಾನಂದ, ಕುಶಾಲನಗರ ನೇಕಾರರ ಸಹಕಾರ ಸಂಘದ ಕಾರ್ಯದರ್ಶಿ ಸವಿತಾ, ಇತರರು ಇದ್ದರು.