ಮುಳ್ಳೂರು, ಜ. ೬: ಸಮೀಪದ ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾ.ಪಂ.ಯ ೨೦೨೩-೨೪ನೇ ಸಾಲಿನ ಗ್ರಾಮಸಭೆ ಗುರುವಾರ ಗ್ರಾ.ಪಂ. ಅಧ್ಯಕ್ಷೆ ಕಮಲಮ್ಮ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಆವರಣದಲ್ಲಿ ನಡೆಯಿತು.

ಹಾಸನ ಜಿಲ್ಲೆಗೆ ಸೇರಿದ ಮೀಸಲು ಅರಣ್ಯದಿಂದ ಕೊಡಗು ಜಿಲ್ಲೆಗೆ ಬೆಸೂರು ಗ್ರಾ.ಪಂ. ವ್ಯಾಪ್ತಿಯ ಮೂಲಕ ಕಾಡಾನೆಗಳು ಪ್ರವೇಶಿಸುತ್ತವೆ. ಬೆಸೂರು ಗ್ರಾ.ಪಂ. ವ್ಯಾಪ್ತಿ ಕಾಡಾನೆ ಕಾರಿಡಾರ್ ಆಗಿರುವುದರಿಂದ ಕಾಡಾನೆಗಳು ರೈತರ ತೋಟ, ಹೊಲ ಗದ್ದೆಗಳಿಗೆ ನುಸುಳಿ ಕೃಷಿ ಬೆಳೆಗಳನ್ನು ಧ್ವಂಸಗೊಳಿಸುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾಡಾನೆ ಹಾವಳಿ ನಿಯಂತ್ರಿಸಲು ವಿಶೇಷ ಯೋಜನೆ ರೂಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಕಂದಾಯ ಇಲಾಖೆಯು ಕಟ್ಟೆಪುರ ಗ್ರಾಮದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಜನಾಂಗದವರಿಗೆ ಕಾದಿರಿಸಿರುವ ಸ್ಮಶಾನ ಜಾಗವು ಕಲ್ಲು ಬಂಡೆಗಳಿAದ ಕೂಡಿವೆ. ಈ ಜಾಗದಲ್ಲಿ ಮೃತಪಟ್ಟವರ ಅಂತ್ಯಸAಸ್ಕಾರ ಮಾಡಲು ಸಾಧ್ಯವಾಗುವುದಿಲ್ಲ. ಇದರ ಬದಲಿಗೆ ಸ್ಮಶಾನಕ್ಕಾಗಿ ಸೂಕ್ತ ಜಾಗವನ್ನು ಮಂಜೂರು ಮಾಡಿಕೊಡುವಂತೆ ಗ್ರಾಮಸ್ಥರ ಪರವಾಗಿ ಪವಿತ್ರ ಅವರು ವಿಷಯ ಪ್ರಸ್ತಾಪಿಸಿದರು.

ನ್ಯಾಯದಳ್ಳ ಸರಕಾರಿ ಶಾಲೆ ಬಳಿ ಗ್ರಾ.ಪಂ.ಯಿAದ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್‌ನಿAದ ನೀರು ಸೋರುತ್ತಿದ್ದು, ಅನವಶ್ಯಕ ನೀರು ಪೋಲಾಗುತ್ತಿರುವ ಬಗ್ಗೆ ಗ್ರಾಮಸ್ಥ ಸುಂದರಮೂರ್ತಿ ಗ್ರಾಮಸಭೆಯಲ್ಲಿ ಪ್ರಸ್ತಾಪಿಸಿದರು. ಈ ವಿಷಯಕ್ಕೆ ಸಂಬAಧಿಸಿದAತೆ ಸಭೆಯಲ್ಲಿ ಗ್ರಾಮಸ್ಥರು ಮತ್ತು ಗ್ರಾ.ಪಂ.ಸದಸ್ಯರ ನಡುವೆ ಸುದೀರ್ಘ ಚರ್ಚೆ ನಡೆಯಿತು. ಇಲಾಖೆ ಅಧಿಕಾರಿಗಳ ಮಾಹಿತಿಗೆ ಸಂಬAಧಪಟ್ಟAತೆ ವಿಷಯ ಪ್ರಸ್ತಾಪಿಸಿದ ಗ್ರಾಮಸ್ಥ ಸೋಮಶೇಖರ್ ಗ್ರಾಮಸಭೆಯಲ್ಲಿ ಮಾಹಿತಿ ನೀಡುವ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ ಪ್ರಕಾರದಂತೆ ಕೆಲಸ ನಿರ್ವಹಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ಬೆಸೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಗ್ರಾಮ ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಹರೀಶ್, ಸದಸ್ಯರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಿರೀಶ್ ಗ್ರಾ.ಪಂ. ಕಚೇರಿ ಸಿಬ್ಬಂದಿ ಹಾಜರಿದ್ದರು.