ಸೋಮವಾರಪೇಟೆ, ಜ. ೬: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹುಟ್ಟು ಹಬ್ಬದ ಅಂಗವಾಗಿ ೩೭ನೇ ವರ್ಷದ ರಾಜ್ಯಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಹೆಚ್.ಎ. ನಾಗರಾಜ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾ. ೨೦ ರಂದು ಪಟ್ಟಣದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದ್ದು, ರಾಜ್ಯದ ಪ್ರಖ್ಯಾತ ತಂಡಗಳು ಭಾಗವಹಿಸಲಿವೆ. ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು ಎಂದರು. ತಾ. ೨೦ ರಂದು ಬೆಳಿಗ್ಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ. ಈ ವಿಭಾಗಕ್ಕೂ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ಉದ್ಘಾಟಿಸಲಿದ್ದು, ಶಾಸಕ ಡಾ. ಮಂಥರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಜಿಲ್ಲಾ ಕಾಂಗ್ರೆಸ್ನ ಉಪಾಧ್ಯಕ್ಷ ಕೆ.ಎಂ. ಲೋಕೇಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗೆ ೯೪೮೩೮೪೩೩೯೫ ಅಥವಾ ೯೪೪೯೭೯೧೭೯೧ ಸಂಪರ್ಕಿಸಬಹುದು ಎಂದರು. ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಹೆಚ್.ಬಿ. ರಾಜಪ್ಪ, ಜೇಕಬ್ ಸೈಮನ್, ಪುನೀತ್, ಬಸವರಾಜು, ಜಮೀರ್, ಅಜೇಯ್ ಉಪಸ್ಥಿತರಿದ್ದರು.