ಸೋಮವಾರಪೇಟೆ, ಜ. ೬: ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಗೌಡಳ್ಳಿ ನವದುರ್ಗಾಪರಮೇಶ್ವರಿ ಸಮುದಾಯ ಭವನದ ಕಾಮಗಾರಿಗೆ ರೂ. ೪ ಲಕ್ಷ ಅನುದಾನ ನೀಡಿದ್ದು, ಗ್ರಾಮದ ಪ್ರಮುಖರು ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ನವೀನ್ ಅಜ್ಜಳ್ಳಿ ಅವರು, ಕಳೆದ ೨೦೧೭ರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಸಮುದಾಯ ಭವನ ನಿರ್ಮಾಣಕ್ಕೆ ರೂ. ೫ ಲಕ್ಷ ಅನುದಾನ ನೀಡಿದ್ದು, ಇದೀಗ ಹೆಚ್ಚಿನ ಅಭಿವೃದ್ಧಿಗೆ ರೂ. ೪ ಲಕ್ಷ ಒದಗಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಹೆಚ್.ಆರ್., ಗ್ರಾಮ ಪಂಚಾಯಿತಿ ಸದಸ್ಯರು, ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳು ಮತ್ತು ಅರ್ಚಕ ವಿಶ್ವರೂಪಾಚಾರ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.