ನಾಪೋಕ್ಲು, ಜ. ೬: ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ೨೦೨೨-೨೩ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆ ಹಾಗೂ ಜಮಾಬಂದಿ ಸಭೆ ತಾ.೯ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಅಧ್ಯಕ್ಷೆ ಶಾಂತಿ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆಯಲಿದೆ.
ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮದ ಪಿಂಚಣಿದಾರರ ಸಂಘದ ಕಟ್ಟಡದಲ್ಲಿ ಸಭೆ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರೀರ ಶರತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.