ಮಡಿಕೇರಿ, ಜ. ೮: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ನೇತೃತ್ವದಲ್ಲಿ ಸೋಮವಾರಪೇಟೆಯ ಆಂಜನೇಯ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಮುಜರಾಯಿ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದರು. ಸೋಮವಾರಪೇಟೆ ಕಕ್ಕೆಹೊಳೆ ಸಮೀಪದ ಶ್ರೀ ಆಂಜನೇಯ ದೇವಾಲಯದ ಪುನಶ್ಚೇತನ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು, ಶೀಘ್ರವೇ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದರು.
ಈ ಸಂದರ್ಭ ದೇವಾಲಯ ಸಮಿತಿ ಸದಸ್ಯರಾದ ಗೋಪಾಲ್, ನಂದ, ಸುರೇಶ್, ಸೀತಾರಾಮ್, ಉದ್ಯಮಿ ಅರುಣ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ.ಯು. ಹಾಜರಿದ್ದರು.