ಮಡಿಕೇರಿ, ಜ. ೮: ನಗರದ ಶ್ರೀ ಕೋದಂಡರಾಮ ದೇವಾಲಯದಲ್ಲಿ ಅಯೋಧ್ಯೆ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ, ಮನೆಮನೆಗೆ ಹಂಚುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೂಜಾ ಕಾರ್ಯದಲ್ಲಿ ನಗರಸಭಾ ಸದಸ್ಯೆ ಕಲಾವತಿ, ದೇವಾಲಯ ಟ್ರಸ್ಟ್ ಸಮಿತಿ ಅಧ್ಯಕ್ಷ ಹೆಚ್.ಎನ್. ನಂಜುAಡ, ಪ್ರಧಾನ ಕಾರ್ಯದರ್ಶಿ ನರಸಿಂಹ ಮೂರ್ತಿ, ಖಜಾಂಚಿ ಪರಮೇಶ್, ಮಾಜಿ ಅಧ್ಯಕ್ಷ ಮಂಜುನಾಥ್, ರಾಮ ಸೇವಾ ಸಮಿತಿ ಅಧ್ಯಕ್ಷ ತಿಮ್ಮಯ್ಯ, ಗೋಪಿನಾಥ್, ಕುಶಾಲ್ ಸೇರಿದಂತೆ ಮತ್ತಿತರರು ಹಾಜರಿದ್ದರು.