ಮಡಿಕೇರಿ, ಜ. ೮: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್, ಭಾರತೀಯ ರೆಡ್ ಕ್ರಾಸ್, ಲಯನ್ಸ್ ಕ್ಲಬ್, ವಾಹನ ಚಾಲಕರ ಸಂಘ ಹಾಗೂ ಸಾರ್ವ ಜನಿಕ ಸಹಯೋಗದಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ತಡೆಗಟ್ಟುವ ಜಾಗೃತಿ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಿತು.

ಬಳಿಕ ರಾಜಾಸೀಟು ಉದ್ಯಾನ ವನದಲ್ಲಿ ಜಾಗೃತಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭ ದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ಪಾಲ್ಗೊಂ ಡಿದ್ದರು.