*ಗೋಣಿಕೊಪ್ಪ, ಜ. ೮: ತಿತಿಮತಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವಕ್ಕೆ ನಿವೃತ್ತ ಸುಬೇದಾರ್ ಮೇಜರ್ ಬೊಳ್ಳಿಮಾಡ ಎ. ನಂಜಪ್ಪ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ದೇಶದ ರಕ್ಷಣಾ ಕ್ಷೇತ್ರದಲ್ಲಿ ಯುವಕರಿಗೆ ಇರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜ ಅಧ್ಯಕ್ಷತೆಯಲ್ಲಿ ತಿತಿಮತಿ ವಿಎಸ್‌ಎಸ್‌ಎನ್ ಬ್ಯಾಂಕಿನ ಅಧ್ಯಕ್ಷ ರಾಮಕೃಷ್ಣ, ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.