ಬೆಂಗಳೂರು, ಜ. ೯: ಅಪೂರ್ಣಗೊಂಡಿರುವ ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಜನವರಿ ತಿಂಗಳಾAತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
ಸಚಿವರ ಅಧ್ಯಕ್ಷತೆಯಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.
ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. (ಮೊದಲ ಪುಟದಿಂದ) ಆದರೆ, ಇದುವರೆಗೂ ಪೂರ್ಣಗೊಳಿಸಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಶೀಘ್ರವಾಗಿ ಸಿದ್ಧಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನು ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾAತ್ಯದ ಒಳಗೆ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದರು.
ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನು ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ನಿರ್ದೇಶನ ನೀಡಿದರು.