ಮಡಿಕೇರಿ, ಜ. ೧೦: ಜಿಲ್ಲೆಯಲ್ಲಿ ಮಾಜಿ ಸೈನಿಕರ ಸಮಸ್ಯೆಗಳಿಗೆ ಸಂಬAಧಿಸಿದAತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯೊಂದಿಗೆ ಚರ್ಚಿಸಿ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ಏರ್ಪಡಿಸುವುದಾಗಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಭರವಸೆಯಿತ್ತಿದ್ದಾರೆ.

ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದ ಸಂದರ್ಭ ಅವರು ಸಕರಾತ್ಮಕವಾಗಿ ಸ್ಪಂದಿಸಿ ಈ ಭರವಸೆ ನೀಡಿದರು. ಸಂಘದ ಕಾರ್ಯದರ್ಶಿ ನಿವೃತ್ತ ಮೇಜರ್ ಓಡಿಯಂಡ ಎಸ್. ಚಿಂಗಪ್ಪ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದರು. ಭೂ ಮಂಜೂರಾತಿಗೆ ಸಂಬAಧಿಸಿದAತೆ ಇರುವ ತೊಂದರೆ, ಕಡತಗಳು ಬಾಕಿಯಿರುವದು, ಸಂಘದ ಕಚೇರಿಗೆ ಜಾಗ ಸಿಗದಿರುವುದು ಇತ್ಯಾದಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಮುಖ್ಯವಾಗಿ ಸರಕಾರದ ಆದೇಶ ಇದ್ದರೂ ಮಾಜಿ ಸೈನಿಕರಿಗೆ ಕಾನೂನು ಬದ್ದವಾಗಿ ಜಾಗ ಮಂಜೂರಾತಿಯಾಗದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಚಿಂಗಪ್ಪ ಅವರು ತಿಳಿಸಿದ್ದಾರೆ. ಈ ಬೇಡಿಕೆಗಳ ಬಗ್ಗೆ ಅವರು ಸಕರಾತ್ಮಕವಾಗಿ ಸ್ಪಂದಿಸಿ ಸದ್ಯದಲ್ಲಿ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾಗಿ ಸಂಘದ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭ ಪದಾಧಿಕಾರಿಗಳಾದ ಅಗ್ರಿಮನೆ ವಾಸಪ್ಪ, ಕುಟ್ಟಂಡ ನಂದ ಮಾದಪ್ಪ, ನಾಟೋಳಂಡ ಸೋಮಯ್ಯ, ಕನ್ನಂಡ ಸುರೇಶ್ ಅವರುಗಳು ಪಾಲ್ಗೊಂಡಿದ್ದರು.